ಮುಂಬೈ(ಜೂ.25): ವೆಸ್ಟ್ ಇಂಡೀಸ್ ದಿಗ್ಗಜ ಕ್ರಿಕೆಟಿಗ, ಮಾಜಿ ನಾಯಕ ಬ್ರಿಯಾನ್ ಲಾರಾ ಎದೆ ನೋವಿನಿಂದ ಆಸ್ಪತ್ರೆ ದಾಖಲಾಗಿದ್ದಾರೆ. ವಿಶ್ವಕಪ್ ಪಂದ್ಯದ ಕುರಿತು ಸ್ಟಾರ್ ಸ್ಪೋರ್ಟ್ಸ್ ವಾಹಿನಿಯಲ್ಲಿ ವಿಶ್ಲೇಷಣೆ ಮಾಡುತ್ತಿರುವ ಬ್ರಿಯಾನ್ ಲಾರಾಗೆ ದಿಢೀರ್ ಎದೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹೊಟೆಲ್‌ನಲ್ಲಿದ್ದ ವೇಳೆ ಲಾರಾಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಮುಂಬೈನ ಲೋವರ್ ಪರೆಲ್ ಸಮೀಪದ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯಾಹ್ನ 12.30ರ ಸುಮಾರಿಗೆ ಲಾರ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಲಾರಾಗೆ ಎದೆ ನೋವು ಕಾಣಿಸಿಕೊಂಡಿದೆ ಅನ್ನೋ ಮಾಹಿತಿ ಮಾತ್ರ ಬಹಿರಂಗವಾಗಿದೆ. ಸದ್ಯ ಲಾರಾ ಚೇತರಿಸಿಕೊಂಡಿದ್ದಾರೆ. ಆದರೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿಲ್ಲ.