ಬರ್ಮಿಂಗ್‌ಹ್ಯಾಮ್(ಜು.07): ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ-ನ್ಯೂಜಲೆಂಡ್ ಹೋರಾಟ ನಡೆಸಿದರೆ, ಜುಲೈ 11 ರಂದು ನಡೆಯಲಿರುವ 2ನೇ ಸೆಮಿಫೈನಲ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿದೆ. ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ಮೈಂಡ್ ಗೇಮ್ ಶುರುಮಾಡಿದೆ.

ಇದನ್ನೂ ಓದಿ: ಐಸಿಸಿ ಏಕದಿನ ಆಟಗಾರರ ರ‍್ಯಾಂಕಿಂಗ್ ಪ್ರಕಟ- ಅಗ್ರಸ್ಥಾನದಲ್ಲಿ 'ಕೊಹ್ಲಿ' ಬಾಯ್ಸ್!

ಲೀಗ್ ಹಂತದಲ್ಲಿ ಇಂಗ್ಲೆಂಡ್ ವಿರುದ್ಧ ಗೆಲುವು ಸಾಧಿಸಿರುವ ಆಸ್ಟ್ರೇಲಿಯಾ ಇದೀಗ ಸೆಮಿಫೈನಲ್ ಪಂದ್ಯದಲ್ಲೂ ಮಣಿಸೋ ವಿಶ್ವಾಸದಲ್ಲಿದೆ. ಮಹತ್ವದ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ಸ್ಪಿನ್ನರ್ ನಥನ್ ಲಿಯೊನ್, ಮಹತ್ವದ ಪಂದ್ಯದಲ್ಲಿ ಸೋಲೋ ಸರದಿ ಇಂಗ್ಲೆಂಡ್ ತಂಡದ್ದು ಎಂದಿದ್ದಾರೆ.

ಇದನ್ನೂ ಓದಿ: 11 ವರ್ಷಗಳ ಬಳಿಕ ಸೆಮಿಫೈನಲ್‌ನಲ್ಲಿ ಕೊಹ್ಲಿ-ವಿಲಿಯಮ್ಸನ್ ಮುಖಾಮುಖಿ!

ಆತಿಥೇಯರ ಹೋರಾಟ ಈ ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಪಂದ್ಯದೊಂದಿಗೆ ಅಂತ್ಯವಾಗಲಿದೆ ಎಂದಿದ್ದಾರೆ. ಅದ್ಭುತ ಪ್ರದರ್ಶನದ ಮೂಲಕ ಸೆಮಿಫೈನಲ್ ಪ್ರವೇಶಿಸಿದ ಆಸ್ಟ್ರೇಲಿಯಾ ಅಂತಿಮ ಲೀಗ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಮುಗ್ಗರಿಸಿತ್ತು. ಇತ್ತ ಇಂಗ್ಲೆಂಡ್ ಅದ್ಭುತ ಪ್ರದರ್ಶನ ನೀಡೋ ಮೂಲಕ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಸೆಮಿಫೈನಲ್ ಪ್ರವೇಶ ಪಡೆದಿದೆ.