ಮ್ಯಾಂಚೆಸ್ಟರ್(ಜೂ.25): ವಿಶ್ವಕಪ್ ಟೂರ್ನಿಯಲ್ಲಿ ಅಫ್ಘಾನಿಸ್ತಾನ ವಿರುದ್ಧದ ಗೆಲುವಿನ ಬಳಿಕ ಕೆಲ ದಿನಗಳ ಬಿಡುವು ಪಡೆದಿರುವ ಟೀಂ ಇಂಡಿಯಾ ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯಕ್ಕೆ ತಯಾರಿ ನಡೆಸುತ್ತಿದೆ. ಪಾಕ್ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡು ತಂಡದಿಂದ ಹೊರಬಿದ್ದ ವೇಗಿ ಭುವನೇಶ್ವರ್ ಕುಮಾರ್ ಇದೀಗ ಅಭ್ಯಾಸಕ್ಕೆ ಇಳಿದಿದ್ದಾರೆ.

ಇದನ್ನೂ ಓದಿ: ಭಾರತ ವಿರುದ್ಧದ ಪಂದ್ಯಕ್ಕೂ ಮುನ್ನ ಬಾಂಗ್ಲಾದೇಶಕ್ಕೆ ಇಂಜುರಿ ಆಘಾತ!

ಮ್ಯಾಂಚೆಸ್ಟರ್‌ನಲ್ಲಿ ನೆಟ್ ಪ್ರಾಕ್ಟೀಸ್ ಮಾಡುತ್ತಿರುವ ಟೀಂ ಇಂಡಿಯಾ ಬಳಗದಲ್ಲಿ ಭುವನೇಶ್ವರ್ ಕುಮಾರ್ ಕೂಡ ಕಾಣಸಿಕೊಂಡಿದ್ದಾರೆ. ಭುವಿ ಗಾಯದಿಂದ ಚೇತರಿಸಿಕೊಂಡಿರುವುದು ಟೀಂ ಇಂಡಿಯಾ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ಭುವನೇಶ್ವರ್ ಕುಮಾರ್ ಇಂಜುರಿಯಿಂದ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು.

 

ಭುವನೇಶ್ವರ್ ಬದಲು ಮೊಹಮ್ಮದ್ ಶಮಿ ತಂಡ ಸೇರಿಕೊಂಡಿದ್ದರು. ಶಮಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿ ಟೀಂ ಇಂಡಿಯಾಗೆ ರೋಚಕ ಗೆಲುವು ತಂದುಕೊಟ್ಟಿದ್ದರು. ಇದೀಗ ಭುವನೇಶ್ವರ್ ಕುಮಾರ್ ಕೂಡ ಫಿಟ್ ಆಗಿರೋದು ಟೀಂ ಇಂಡಿಯಾ ಬೌಲಿಂಗ್ ವಿಭಾಗವನ್ನು ಮತ್ತಷ್ಟು ಬಲಪಡಿಸಿದೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಿಂದಲೂ ಭುವಿಗೆ ವಿಶ್ರಾಂತಿ ನೀಡೋ ಸಾಧ್ಯತೆ ಹೆಚ್ಚಿದೆ. ಈ ಪಂದ್ಯದಲ್ಲಿ ಮೊಹಮ್ಮದ್ ಶಮಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಈ ಮೂಲಕ ಭುವಿಗೆ ಹೆಚ್ಚಿನ ವಿಶ್ರಾಂತಿ ನೀಡಲು ಟೀಂ ಮ್ಯಾನೇಜ್ಮೆಂಟ್ ನಿರ್ಧರಿಸಿದೆ.