ಮ್ಯಾಂಚೆಸ್ಟರ್‌[ಜೂ.18]: ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಅನಾಯಾಸವಾಗಿ ಗೆದ್ದು ಬೀಗಿದ ಭಾರತಕ್ಕೆ ಇದೀಗ ಆಘಾತವೊಂದು ಎದುರಾಗಿದ್ದು ತಂಡದ ಪ್ರಮುಖ ವೇಗಿ ಭುವನೇಶ್ವರ್ ಕುಮಾರ್ ಗಾಯದ ಸಮಸ್ಯೆಯಿಂದಾಗಿ ಮುಂದಿನ ಎರಡು-ಮೂರು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಇದು ತಂಡಕ್ಕೆ ಹಿನ್ನಡೆಯಾಗುವ ಸಾಧ್ಯತೆಯಿದೆ.    

ಪಾಕಿಸ್ತಾನ ವಿರುದ್ಧದ ಪಂದ್ಯದ ವೇಳೆ ಸ್ನಾಯು ಸೆಳೆತಕ್ಕೊಳಗಾದ ಭಾರತ ತಂಡದ ವೇಗದ ಬೌಲರ್‌ ಭುವನೇಶ್ವರ್‌ ಕುಮಾರ್‌, ಕನಿಷ್ಠ 2ರಿಂದ 3 ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ನಾಯಕ ವಿರಾಟ್‌ ಕೊಹ್ಲಿ ತಿಳಿಸಿದ್ದಾರೆ. ಪಾಕ್ ವಿರುದ್ಧದ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ಕೇವಲ 2.4 ಓವರ್’ಗಳನ್ನಷ್ಟೇ ಬೌಲಿಂಗ್ ಮಾಡಿದ್ದರು. ಆ ಬಳಿಕ ಸ್ನಾಯು ನೋವಿನ ಸಮಸ್ಯೆಯಿಂದಾಗಿ ಮೈದಾನದಿಂದ ಹೊರನಡೆದಿದ್ದರು.

ಇಂಡೋ-ಪಾಕ್ ಪಂದ್ಯ: ಗಾಯಗೊಂಡ ಭುವನೇಶ್ವರ್ ಔಟ್!

ಇದುವರೆಗೂ ಭುವಿ ಮೂರು ಪಂದ್ಯಗಳನ್ನಾಡಿ ಪ್ರಮುಖ 5 ವಿಕೆಟ್ ಕಬಳಿಸಿ ಗಮನ ಸೆಳೆದಿದ್ದಾರೆ. ಭಾರತ ತನ್ನ ಮುಂದಿನ ಪಂದ್ಯವನ್ನು ಜೂ.22ರಂದು ಆಫ್ಘಾನಿಸ್ತಾನ ವಿರುದ್ಧ ಆಡಲಿದ್ದು, ಮೊಹಮದ್‌ ಶಮಿ ಆಡುವ ಹನ್ನೊಂದರಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. 

ಧವನ್‌ಗೆ ಗಾಯ; ಮತ್ತೋರ್ವ ಡೆಲ್ಲಿ ಕ್ರಿಕೆಟಿಗನಿಗೆ ಹೊಡಿತು ಜಾಕ್‌ಪಾಟ್

ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾಗೂ ಗಾಯದ ಸಮಸ್ಯೆ ಕಾಡುತ್ತಿದ್ದು, ಈಗಾಗಲೇ ಶಿಖರ್ ಧವನ್ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡು ಮೂರು ವಾರಗಳ ಮಟ್ಟಿಗೆ ವಿಶ್ರಾಂತಿ ಪಡೆಯುತ್ತಿದ್ದಾರೆ.