ಲಂಡನ್[ಜೂ.26]: ಏಕದಿನ ವಿಶ್ವಕಪ್ ಬಳಿಕ ಭಾರತ ವಿರುದ್ಧದ ಏಕದಿನ ಹಾಗೂ ಟೆಸ್ಟ್ ಚಾಂಪಿಯನ್’ಶಿಪ್ ಆಡಲು ರೆಡಿ ಎಂದು ವೆಸ್ಟ್ ಇಂಡೀಸ್ ಸ್ಫೋಟಕ ಬ್ಯಾಟ್ಸ್’ಮನ್ ಕ್ರಿಸ್ ಗೇಲ್ ಹೇಳಿದ್ದಾರೆ. ಭಾರತ ವಿರುದ್ಧದ ಸರಣಿ ಬಳಿಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳುವುದಾಗಿ ಸ್ವತಃ ಕ್ರಿಸ್ ಗೇಲ್ ಹೇಳಿದ್ದಾರೆ.

ಏಕದಿನ ಕ್ರಿಕೆಟ್‌ಗೆ ವಿದಾಯ: ನಿರ್ಧಾರ ಪ್ರಕಟಿಸಿದ ಕ್ರಿಸ್ ಗೇಲ್!

ಈ ಮೊದಲು ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಏಕದಿನ ವಿಶ್ವಕಪ್ ಬಳಿಕ ಕ್ರಿಸ್ ಗೇಲ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಲಿದ್ದಾರೆ ಎಂದು ತಿಳಿಸಿತ್ತು. ಇದೀಗ ವೆಸ್ಟ್ ಇಂಡೀಸ್ ತಂಡ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಬಹುತೇಕ ಕ್ಷೀಣಿಸಿರುವುದರಿಂದ, ಇನ್ನೂ ಕೆಲಕಾಲ ಗೇಲ್ ಆಟವನ್ನು ಕಣ್ತುಂಬಿಕೊಳ್ಳಬಹುದಾಗಿದೆ. 

ಟೀಂ ಇಂಡಿಯಾ ವಿಂಡೀಸ್‌ ಪ್ರವಾಸ: ವೇಳಾಪಟ್ಟಿ ಪ್ರಕಟ

ಯೂನಿವರ್ಸಲ್ ಖ್ಯಾತಿಯ ಕ್ರಿಸ್ ಗೇಲ್ ಭಾರತ ವಿರುದ್ಧ ಟೆಸ್ಟ್ ಹಾಗೂ ಏಕದಿನ ಪಂದ್ಯವನ್ನಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆದರೆ ಟಿ20 ಸರಣಿ ಆಡುವುದಿಲ್ಲ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಕ್ರಿಸ್ ಗೇಲ್ 294 ಏಕದಿನ, 103 ಟೆಸ್ಟ್ ಸೇರಿದಂತೆ ಮೂರು ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಒಟ್ಟು 355 ಪಂದ್ಯಗಳನ್ನಾಡಿದ್ದು, ಒಟ್ಟಾರೆ 19 ಸಾವಿರಕ್ಕೂ ಅಧಿಕ ರನ್ ಬಾರಿಸಿದ್ದಾರೆ.     

ವಿಶ್ವಕಪ್ ಟೂರ್ನಿಯ ಬಳಿಕ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದ್ದು, ಆಗಸ್ಟ್ 3ರಿಂದ ತಲಾ 3ಟಿ20 ಮತ್ತು ಏಕದಿನ ಪಂದ್ಯಗಳನ್ನಾಡಲಿದ್ದು,  ಆ ಬಳಿಕ ಕೊನೆಯಲ್ಲಿ 2 ಟೆಸ್ಟ್ ಪಂದ್ಯಗಳನ್ನು ಆಡಲಿದೆ.