ಲಾರ್ಡ್ಸ್(ಜೂ.24): ವಿಶ್ವಕಪ್ ಟೂರ್ನಿಯಲ್ಲಿ ಮತ್ತೊಂದು ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವಿನ ಹೋರಾಟ ಇದೀಗ ಅಭಿಮಾನಿಗಳ ಕುತೂಹಲವನ್ನು ಇಮ್ಮಡಿಗೊಳಿಸಿದೆ. ಆದರೆ ಮಹತ್ವದ ಪಂದ್ಯ ಆರಂಭಕ್ಕೂ ಮುನ್ನ ಇಂಗ್ಲೆಂಡ್ ತಂಡಕ್ಕೆ ತೀವ್ರ ಹಿನ್ನಡೆಯಾಗಿದೆ.   ಅದ್ಭುತ ಪ್ರದರ್ಶನದ ಮೂಲಕ ಗಮನಸೆಳೆದಿದ್ದ ಇಂಗ್ಲೆಂಡ್ ಆರಂಭಿಕ ಬ್ಯಾಟ್ಸ್‌ಮನ್ ಜೇಸನ್ ರಾಯ್ ಆಸಿಸ್ ವಿರುದ್ಧದ ಪಂದ್ಯದಿಂದ ಹೊರಬಿದ್ದಿದ್ದಾರೆ.

ಇದನ್ನೂ ಓದಿ: ಧೋನಿಯ ಹೊಸ ಅವತಾರ ಬಟ್ಲರ್...!

ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಇಂಜುರಿಗೆ ತುತ್ತಾದ ಜೇಸನ್ ರಾಯ್, ಆಫ್ಫಾನಿಸ್ತಾನ ಹಾಗೂ ಶ್ರೀಲಂಕಾ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಸಂಪೂರ್ಣ ಚೇತರಿಸಿಕೊಳ್ಳದ ಕಾರಣ ಜೇಸನ್ ರಾಯ್ ಆಸಿಸ್ ವಿರುದ್ಧದ ಪಂದ್ಯದಿಂದಲೂ ಹೊರಬಿದ್ದಿದ್ದಾರೆ.

ಇದನ್ನೂ ಓದಿ:  ಟ್ವಿಟರ್‌ನಲ್ಲಿ ಟ್ರೆಂಡ್ ಆಯ್ತು ಅಂಪೈರ್ ಜೊತೆ ಕೊಹ್ಲಿ ವಾಗ್ವಾದ!

ರಾಯ್ ಆಡಿದ 3 ಪಂದ್ಯಗಳಿಂದ 215 ರನ್ ಸಿಡಿಸಿದರು. ಬಾಂಗ್ಲಾದೇಶ ವಿರುದ್ದ 153 ರನ್ ಸಿಡಿಸಿದ್ದರು. ಇದೀಗ ರಾಯ್ ಹೊರಬಿದ್ದಿರುವುದು ಇಂಗ್ಲೆಂಡ್ ತಂಡದ ತಲೆನೋವು ಹೆಚ್ಚಿಸಿದೆ. ಜೂನ್ 25 ರಂದು ಲಾರ್ಡ್ಸ್ ಮೈದಾನದಲ್ಲಿ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿದೆ.