ಚೆಸ್ಟರ್ ಲೆ ಸ್ಟ್ರೀಟ್(ಜು.03): ವಿಶ್ವಕಪ್ ಸೆಮಿಫೈನಲ್ ಪ್ರವೇಶಿಸಬೇಕಾದರೆ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಕ್ಕೆ ಈ ಪಂದ್ಯ ಗೆಲ್ಲಲೇಬೇಕು. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್  ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

 

ನ್ಯೂಜಿಲೆಂಡ್ 8 ಪಂದ್ಯ ಆಡಿ 11 ಅಂಕ ಸಂಪಾದಿಸಿದ್ದರೆ, ಇಂಗ್ಲೆಂಡ್ 8 ಪಂದ್ಯದಿಂದ 10 ಅಂಕ ಸಂಪಾದಿಸಿದೆ. ಅಂಕಪಟ್ಟಿಯಲ್ಲಿ ಕ್ರಮವಾಗಿ 3 ಮತ್ತು 4ನೇ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸೋ ತಂಡ ಸೆಮಿಫೈನಲ್ ಅರ್ಹತೆಯನ್ನು ಖಚಿತಪಡಿಸಿಕೊಳ್ಳಲಿದೆ.