ಬರ್ಮಿಂಗ್ ಹ್ಯಾಮ್[ಜೂ.30]: ಭಾರತ-ಇಂಗ್ಲೆಂಡ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಎಡ್ಜ್’ಬಾಸ್ಟನ್ ಸಾಕ್ಷಿಯಾಗಲಿದ್ದು, ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಈ ಪಂದ್ಯ ಜಯಿಸಿ ಸೆಮೀಸ್ ಪ್ರವೇಶಿಸುವ ಲೆಕ್ಕಾಚಾರದಲ್ಲಿದೆ. ಇನ್ನು ಇಂಗ್ಲೆಂಡ್ ಅಂತಿಮ ನಾಲ್ಕರಲ್ಲಿ ಸ್ಥಾನ ಪಡೆಯಬೇಕಿದ್ದರೆ, ಈ ಪಂದ್ಯವನ್ನು ಜಯಿಸಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ.

ವಿಶ್ವಕಪ್‌ 2019: ಇಂಗ್ಲೆಂಡ್ ಬಗ್ಗುಬಡಿಯಲು ರೆಡಿಯಾದ ಟೀಂ ಇಂಡಿಯಾ

ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ ಒಂದೂ ಸೋಲು ಕಾಣದ ಟೀಂ ಇಂಡಿಯಾ ಜಯದ ನಾಗಾಲೋಟ ಮುಂದುವರೆಸುವ ವಿಶ್ವಾಸದಲ್ಲಿದೆ. ಹಾಗಂದ ಮಾತ್ರಕ್ಕೆ ಟೀಂ ಇಂಡಿಯಾದಲ್ಲಿ ಎಲ್ಲವು ಸರಿ ಇದೆ ಎಂದು ಹೇಳಲು ಸಾಧ್ಯವಿಲ್ಲ. ಅಂಬಟಿ ರಾಯುಡು ಬದಲು ತಂಡದಲ್ಲಿ ಸ್ಥಾನ ಪಡೆದ ವಿಜಯ್ ಶಂಕರ್ ಅವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಮೂಡಿ ಬಂದಿಲ್ಲ. ನಾಲ್ಕನೇ ಕ್ರಮಾಂಕದಲ್ಲಿ ವಿಜಯ್ ಶಂಕರ್ ಕೇವಲ 58 ರನ್ ಬಾರಿಸಿದ್ದಾರೆ. ಇನ್ನು ಬೌಲಿಂಗ್ ನಲ್ಲಿ ಪಡೆದದ್ದು ಕೇವಲ 2 ವಿಕೆಟ್ ಮಾತ್ರ. ಅದರಲ್ಲೂ ಟೀಂ ಇಂಡಿಯಾ ಮಧ್ಯಮ ಕ್ರಮಾಂಕದಲ್ಲಿ ಮಂದಗತಿಯಲ್ಲಿ ರನ್ ಕಲೆ ಹಾಕುತ್ತಿದೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ವಿಜಯ್ ಶಂಕರ್ ಕೈಬಿಟ್ಟು, ಅನುಭವಿ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಇಲ್ಲವೇ ಸ್ಫೋಟಕ ಎಡಗೈ ಬ್ಯಾಟ್ಸ್’ಮನ್ ರಿಷಭ್ ಪಂತ್’ಗೆ ಅವಕಾಶ ಸಿಗುವ ಸಾಧ್ಯತೆಯಿದೆ. 

ನೂತನ ಜರ್ಸಿಯಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರು ಕಂಡಿದ್ದು ಹೀಗೆ!

ಇದನ್ನು ಹೊರತುಪಡಿಸಿದರೆ ನಾಯಕ ಕೊಹ್ಲಿ ಹೆಚ್ಚಿನ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ. ಈ ಸಂದರ್ಭದಲ್ಲಿ ಸುವರ್ಣನ್ಯೂಸ್.ಕಾಂ ಆಯ್ಕೆ ಮಾಡಿದ ಟೀಂ ಇಂಡಿಯಾ ಸಂಭಾವ್ಯ ತಂಡ ಹೀಗಿದೆ ನೋಡಿ.

ಭಾರತ: ರೋಹಿತ್‌ ಶರ್ಮಾ, ಕೆ.ಎಲ್‌.ರಾಹುಲ್‌, ವಿರಾಟ್‌ ಕೊಹ್ಲಿ(ನಾಯಕ), ವಿಜಯ್‌ ಶಂಕರ್‌/ದಿನೇಶ್ ಕಾರ್ತಿಕ್/ರಿಷಭ್ ಪಂತ್, ಎಂ.ಎಸ್‌.ಧೋನಿ, ಕೇದಾರ್‌ ಜಾಧವ್‌, ಹಾರ್ದಿಕ್‌ ಪಾಂಡ್ಯ, ಮೊಹಮದ್‌ ಶಮಿ, ಕುಲ್ದೀಪ್‌ ಯಾದವ್‌, ಜಸ್ಪ್ರೀತ್ ಬುಮ್ರಾ, ಯಜುವೇಂದ್ರ ಚಹಲ್‌.