Asianet Suvarna News Asianet Suvarna News

ವಿಶ್ವಕಪ್ ಫೈನಲ್ ಭವಿಷ್ಯ ನುಡಿದ ಜಾಂಟಿ ರೋಡ್ಸ್

ವಿಶ್ವಕಪ್ ಟೂರ್ನಿಯಲ್ಲಿ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್ ಪ್ರವೇಶಿಸಿವೆ. ಈ ಸಂದರ್ಭದಲ್ಲಿ ಫೈನಲ್ ಪ್ರವೇಶಿಸುವ ತಂಡಗಳು ಯಾವುವು ಎನ್ನುವುದರ ಬಗ್ಗೆ ದಕ್ಷಿಣ ಆಫ್ರಿಕಾ ಮಾಜಿ ಕ್ರಿಕೆಟಿಗ ಜಾಂಟಿ ರೋಡ್ಸ್ ಭವಿಷ್ಯ ನುಡಿದಿದ್ದಾರೆ. ರೋಡ್ಸ್ ಹೇಳಿದ್ದೇನು..? ನೀವೇ ನೋಡಿ.. 

World Cup 2019 Jonty Rhodes Predicts World Cup finalists
Author
New Delhi, First Published Jul 8, 2019, 6:00 PM IST

ನವದೆಹಲಿ[ಜು.08]:  2019ರ ಏಕದಿನ ವಿಶ್ವಕಪ್ ಟೂರ್ನಿ ನಿರ್ಣಾಯಕ ಹಂತ ತಲುಪಿದ್ದು, ಐಸಿಸಿಯ ಅಗ್ರ 4 ತಂಡಗಳು ಸೆಮಿಫೈನಲ್ ಪ್ರವೇಶಿಸಿವೆ. ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ, ಭಾರತ, ಆತಿಥೇಯ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್ ಪ್ರವೇಶಿಸಿವೆ. 

ಆಸೀಸ್ ವಿರುದ್ಧದ ಗೆಲುವಿನ ಬೆನ್ನಲ್ಲೇ ಸೆಮಿ ಫೈನಲ್ ಭವಿಷ್ಯ ನುಡಿದ ಡುಪ್ಲೆಸಿಸ್!

ಮಂಗಳವಾರ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ-ನ್ಯೂಜಿಲೆಂಡ್ ತಂಡಗಳು ಕಾದಾಡಲು ಸಜ್ಜಾಗಿವೆ. ಇದರ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ಮಾಜಿ ಕ್ರಿಕೆಟಿಗ ಜಾಂಟಿ ರೋಡ್ಸ್ ವಿಶ್ವಕಪ್ ಫೈನಲ್ ಪ್ರವೇಶಿಸುವ ತಂಡಗಳು ಯಾವುವು ಎಂದು ಭವಿಷ್ಯ ನುಡಿದ್ದಾರೆ.

ನಮ್ಮ ಬೆಂಬಲ ಭಾರತಕ್ಕೆ, ವಿರಾಟ್ ಪಡೆ ವಿಶ್ವಕಪ್ ಗೆಲ್ಲಲಿ ಎಂದ ಪಾಕ್ ವೇಗಿ..!

'ಪ್ರಸ್ತುತ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನದಲ್ಲಿರುವ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಫೈನಲ್ ಪ್ರವೇಶಿಸಲಿವೆ. ಆದರೆ ಯಾವ ತಂಡ ಫೇವರೇಟ್ ಎಂದು ಹೇಳಲು ಸಾಧ್ಯವಿಲ್ಲ' ಎಂದು ಸಾರ್ವಕಾಲಿಕ ಶ್ರೇಷ್ಠ ಫೀಲ್ಡರ್ ಎನಿಸಿಕೊಂಡಿರುವ ಜಾಂಟಿ ರೋಡ್ಸ್ ಅಭಿಪ್ರಾಯಪಟ್ಟಿದ್ದಾರೆ. ಈ ಟೂರ್ನಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಅದ್ಭುತ ಪ್ರದರ್ಶನ ತೋರಿವೆ. ಆದರೆ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಪಂದ್ಯದಲ್ಲಿ ಜಯ ಸಾಧಿಸಿದ್ದರೂ, ದಕ್ಷಿಣ ಆಫ್ರಿಕಾ ತಂಡದ ಪ್ರದರ್ಶನ ನಿರಾಸೆ ಮೂಡಿಸಿದೆ ಎಂದು ರೋಡ್ಸ್ ಹೇಳಿದ್ದಾರೆ.

ಮಳೆಗೆ ವಿಶ್ವಕಪ್ ಸೆಮಿಫೈನಲ್ ಪಂದ್ಯ ರದ್ದಾದರೆ, ಯಾರು ಫೈನಲ್‌ಗೆ?

ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್’ನಲ್ಲಿ ಭಾರತ-ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾದರೆ, ಜು.11ರಂದು ಎಡ್ಜ್ ಬಾಸ್ಟನ್’ನಲ್ಲಿ ನಡೆಯಲಿರುವ ಎರಡನೇ ಸೆಮಿಫೈನಲ್’ನಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಮತ್ತು ಆತಿಥೇಯ ಇಂಗ್ಲೆಂಡ್ ತಂಡ ತಂಡಗಳು ಫೈನಲ್ ಟಿಕೆಟ್’ಗಾಗಿ ಹೋರಾಟ ನಡೆಸಲಿವೆ. ಇನ್ನು ಕ್ರಿಕೆಟ್ ಕಾಶಿ ಎನಿಸಿರುವ ಲಾರ್ಡ್ಸ್ ಮೈದಾನದಲ್ಲಿ ಜುಲೈ 14ರಂದು ಫೈನಲ್ ಪಂದ್ಯ ಜರುಗಲಿದೆ. 
 

Follow Us:
Download App:
  • android
  • ios