ಬರ್ಮಿಂಗ್‌ಹ್ಯಾಮ್(ಜೂ.30): ಇಂಗ್ಲೆಂಡ್ ವಿರುದ್ಧದ ವಿಶ್ವಕಪ್ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಸೆಂಚುರಿ ಸಿಡಿಸಿದ್ದಾರೆ. ಇದರೊಂದಿಗೆ ಈ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ಶತಕದ ಸಂಖ್ಯೆ ಮೂರಕ್ಕೇರಿದೆ. ಇಷ್ಟೇ ಅಲ್ಲ, ಗರಿಷ್ಠ ಸೆಂಚುರಿ ಸಿಡಿಸಿದ ಪಟ್ಟಿಯಲ್ಲಿ ರೋಹಿತ್ ಶರ್ಮಮಾ ಇದೀಗ ಮೊದಲ ಸ್ಥಾನಕ್ಕೇರಿದ್ದಾರೆ. 

ಇದನ್ನೂ ಓದಿ: ಸತತ 5 ಅರ್ಧಶತಕ ಸಿಡಿಸಿ ದಾಖಲೆ ಬರೆದ ನಾಯಕ ವಿರಾಟ್ ಕೊಹ್ಲಿ !

ಇಂಗ್ಲೆಂಡ್ ವಿರುದ್ಧ ಸೆಂಚುರಿ ದಾಖಲಿಸುತ್ತಿದ್ದಂತೆ ರೋಹಿತ್ ಶರ್ಮಾ, ಈ ವಿಶ್ವಕಪ್ ಟೂರ್ನಿಯಲ್ಲಿ 2 ಸೆಂಚುರಿ ಸಿಡಿಸಿರುವ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್, ಆ್ಯರೋನ್ ಫಿಂಚ್, ಬಾಂಗ್ಲಾದೇಶದ ಶಕೀಬ್ ಅಲ್ ಹಸನ್, ಇಂಗ್ಲೆಂಡ್‌ನ ಜೋ ರೂಟ್ ಹಾಗೂ ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ್ದಾರೆ. 

ಇದನ್ನೂ ಓದಿ: ವಿಶ್ವಕಪ್ ಟೂರ್ನಿಯಲ್ಲಿ ದಾಖಲೆ ಬರೆದ ಮೊಹಮ್ಮದ್ ಶಮಿ!

ರೋಹಿತ್ ಶರ್ಮಾ 109 ಎಸೆತದಲ್ಲಿ 15 ಬೌಂಡರಿ ನೆರವಿನಿಂದ 102 ರನ್ ಸಿಡಿಸಿ ಔಟಾದರು. ಆದರೆ ರೋಹಿತ್ ಒಂದೇ ಒಂದು ಸಿಕ್ಸರ್ ಸಿಡಿಸಿದ ಸೆಂಚುರಿ ಪೂರೈಸಿದ್ದಾರೆ. ಇದರೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್ 25ನೇ ಶತಕ ಪೂರೈಸಿದರು. ಈ ವಿಶ್ವಕಪ್ ಟೂರ್ನಿಯ 6 ಇನ್ನಿಂಗ್ಸ್‌ಗಳಿಂದ ರೋಹಿತ್ ಶರ್ಮಾ 440 ರನ್ ಸಿಡಿಸಿದ್ದಾರೆ.