ಲೀಡ್ಸ್(ಜು.06): ವಿಶ್ವಕಪ್ ಟೂರ್ನಿಯಲ್ಲಿ ಈಗಾಗಲೇ ಸೆಮಿಫೈನಲ್ ಪ್ರವೇಶಿಸಿರುವ ಟೀಂ ಇಂಡಿಯಾ ಇಂದು ಶ್ರೀಲಂಕಾ ವಿರುದ್ಧ ಅಂತಿಮ ಲೀಗ್ ಪಂದ್ಯ ಆಡುತ್ತಿದೆ. ಟಾಸ್ ಗೆದ್ದ  ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಟೀಂ ಇಂಡಿಯಾದಲ್ಲಿ 2 ಬದಲಾವಣೆ ಮಾಡಲಾಗಿದೆ. ಯಜುವೇಂದ್ರ ಚಹಾಲ್ ಬದಲು ಕುಲ್ದೀಪ್ ಯಾದವ್‌ಗೆ ಸ್ಥಾನ ನೀಡಲಾಗಿದೆ. ಇನ್ನು ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಿ ರವೀಂದ್ರ ಜಡೇಜಾಗೆ ಅವಕಾಶ ನೀಡಲಾಗಿದೆ.

 

8 ಪಂದ್ಯದಲ್ಲಿ 6 ಗೆಲುವು 1 ಸೋಲು ಅನುಭವಿಸಿರುವ ಟೀಂ ಇಂಡಿಯಾ 13 ಅಂಕದೊಂದಿಗೆ ಸೆಮಿಫೈನಲ್ ಸ್ಥಾನ ಖಚಿತ ಪಡಿಸಿದೆ. ಇನ್ನೊಂದು ಗೆಲುವು ಟೀಂ ಇಂಡಿಯಾವನ್ನು ಅಗ್ರಸ್ಥಾನಕ್ಕೆ ಕೊಂಡೊಯ್ಯಲಿದೆ. 2ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಸೌತ್ ಆಫ್ರಿಕಾ ತಂಡವನ್ನು ಮಣಿಸಿದರೆ ಮತ್ತೆ ಆಸ್ಟ್ರೇಲಿಯಾ ಅಗ್ರಸ್ಥಾನಕ್ಕೇರದಲಿದೆ. ಶ್ರೀಲಂಕಾ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲಿನ ಸೋಲು ಅಥವಾ ಗೆಲುವು ಲಂಕಾ ತಂಡದ ಸ್ಥಾನದಲ್ಲಿ ಯಾವುದೇ ಬದಲಾವಣೆಗಳಾಲ್ಲ.