ಲೀಡ್ಸ್(ಜೂ.21): ಒಂದೆಡೆ 5 ಲೀಗ್ ಪಂದ್ಯದಲ್ಲಿ 4 ಗೆಲುವು ಸಾಧಿಸಿರುವ ಇಂಗ್ಲೆಂಡ್ ಮತ್ತೊಂದೆಡೆ 5 ರಲ್ಲಿ 1 ಗೆಲುವು ಸಾಧಿಸಿರುವ ಶ್ರೀಲಂಕಾ ಇಂದು ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದಿರುವ ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಇಂಗ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಲಂಕಾ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ.

 

ಆತಿಥೇಯ ಇಂಗ್ಲೆಂಡ್ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದರೆ, ಶ್ರೀಲಂಕಾ 4 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲೂ ಇಂಗ್ಲೆಂಡ್ ಗೆಲುವಿನ ಫೇವರಿಟ್ ಎನಿಸಿಕೊಂಡಿದೆ. ಇತ್ತ  ಲಂಕಾ ತಂಡದ 2 ಪಂದ್ಯಗಳು ಮಳೆಯಿಂದ ರದ್ದಾಗೋ ಮೂಲಕ ಹೊಡೆತ ನೀಡಿದೆ. ಇಂದು ಮಳೆ ಭೀತಿ ಇಲ್ಲದಿರೋದರಿಂದ ಸಂಪೂರ್ಣ ಪಂದ್ಯ ನಡೆಯಲಿದೆ.