ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಅಭ್ಯಾಸ ನಡೆಸಲು ಮುಂದಾಗಿದ್ದ ಟೀಂ ಇಂಡಿಯಾಗೆ ಮಳೆ ಅಡ್ಡಿಪಡಿಸಿದೆ. ಹೀಗಾಗಿ ವಿರಾಟ್ ಪಡೆ ಒಳಾಂಗಣದಲ್ಲೇ ಅಭ್ಯಾಸ ನಡೆಸಿತು. ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ..
ಮ್ಯಾಂಚೆಸ್ಟರ್[ಜೂ.26]: ಆಫ್ಘಾನಿಸ್ತಾನ ವಿರುದ್ಧ ತಿಣುಕಾಡಿ ಗೆದ್ದ ಭಾರತ ತಂಡ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಅಜೇಯವಾಗಿ ಸೆಮಿಫೈನಲ್ ಪ್ರವೇಶಿಸಲು ಎದುರು ನೋಡುತ್ತಿದೆ. ಹೀಗಾಗಿ ಸಾಕಷ್ಟು ಬೆವರು ಹರಿಸುತ್ತಿದೆ.
Scroll to load tweet…
ಜೂ.27ರಂದು ವೆಸ್ಟ್‌ಇಂಡೀಸ್ ವಿರುದ್ಧ ಸೆಣಸಲಿರುವ ಭಾರತ ತಂಡದ ಅಭ್ಯಾಸಕ್ಕೆ ಮಳೆ ಅಡ್ಡಿಪಡಿಸುತ್ತಿದೆ. ಮಂಗಳವಾರ ನಾಯಕ ವಿರಾಟ್ ಕೊಹ್ಲಿ, ಆಲ್ರೌಂಡರ್ ವಿಜಯ್ ಶಂಕರ್, ವೇಗಿ ಭುವನೇಶ್ವರ್ ಕುಮಾರ್ ಸೇರಿದಂತೆ ಇನ್ನೂ ಕೆಲವರು ಒಳಾಂಗಣ ಅಭ್ಯಾಸ ನಡೆಸಿದರು.
ಸಚಿನ್,ಹೆಡನ್ ದಿಗ್ಗಜರ ಸಾಲಿಗೆ ಸೇರಿದ ಡೇವಿಡ್ ವಾರ್ನರ್!
ಪಂದ್ಯದ ದಿನ ಮಳೆ ಮುನ್ಸೂಚನೆ ಇಲ್ಲದಿರುವ ಕಾರಣ, ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಭಾರತ ಮುಂದಿನ 10 ದಿನಗಳಲ್ಲಿ 4 ಪಂದ್ಯಗಳನ್ನು ಆಡಲಿದ್ದು, ಸೆಮೀಸ್‌ಗೇರಲು ಕನಿಷ್ಠ 2ರಲ್ಲಿ ಗೆಲ್ಲಬೇಕಿದೆ. ಈಗಾಗಲೇ ಟೀಂ ಇಂಡಿಯಾ ಆಡಿದ 5 ಪಂದ್ಯಗಳಲ್ಲಿ 4 ಗೆಲುವು ಹಾಗೂ ಒಂದು ಪಂದ್ಯ ರದ್ದಾಗಿದ್ದರಿಂದ 9 ಅಂಕ ಗಳಿಸಿದ್ದು, ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
