ವಿಶ್ವಕಪ್ ಟೂರ್ನಿಯ ಕ್ಷಣಕ್ಷಣದ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ...

ಲೀಡ್ಸ್[ಜು.06]: ವಿಶ್ವಕಪ್ ಟೂರ್ನಿಯ ಲೀಗ್ ಹಂತದಲ್ಲಿ ಟೀಂ ಇಂಡಿಯಾ ಇಂದು ಶ್ರೀಲಂಕಾ ವಿರುದ್ಧ ಕೊನೆಯ ಪಂದ್ಯವನ್ನು ಆಡಲಿದ್ದು, ವಿರಾಟ್ ಕೊಹ್ಲಿ ಪ್ರಯೋಗಕ್ಕೆ ಮುಂದಾಗುವ ಸಾಧ್ಯತೆಯಿದ್ದು, ಬೆಂಚ್ ಕಾಯಿಸಿದ್ದ ಕೆಲ ಆಟಗಾರರಿಗೆ ಇಂದು ಅವಕಾಶ ಸಿಗುವ ಸಾಧ್ಯತೆಯಿದೆ.

ಹೌದು, ಟೀಂ ಇಂಡಿಯಾ ಈಗಾಗಲೇ 13 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಬಾಂಗ್ಲಾದೇಶ ವಿರುದ್ಧ ಗೆಲ್ಲುತ್ತಿದ್ದಂತೆ ಸೆಮಿಫೈನಲ್ ಅರ್ಹತೆಯನ್ನು ಗಿಟ್ಟಿಸಿಕೊಂಡಿತ್ತು. ಇದೀಗ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಒಂದು ವೇಳೆ ಪ್ರಯೋಗಕ್ಕೆ ಮುಂದಾದರೇ ಕೆಲ ಕ್ರಿಕೆಟಿಗರು ಇಂದು ವಿಶ್ವಕಪ್ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ರಾಜಕೀಯ ಬದಿಗಿಟ್ಟು ವಿಶ್ವಕಪ್ ಫೈನಲ್ ಭವಿಷ್ಯ ನುಡಿದ ಸಿದ್ದರಾಮಯ್ಯ!

ಬದಲಾವಣೆ ಸಾಧ್ಯತೆಗಳು:

* ಮಯಾಂಕ್ ಅಗರ್‌ವಾಲ್: ವಿಜಯ್ ಶಂಕರ್ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ಬಳಿಕ ತಂಡಕೂಡಿಕೊಂಡ ಕನ್ನಡಿಗ ಮಯಾಂಕ್ ಅಗರ್‌ವಾಲ್ ಗೆ ಇಂದು ಅವಕಾಶ ಸಿಗುವ ಸಾಧ್ಯತೆಯಿದೆ. ಹೌದು, ಕಳೆದ ಪಂದ್ಯದಲ್ಲಿ ಕೆ.ಎಲ್ ರಾಹುಲ್ ಆರಂಭಿಕನಾಗಿ ಅರ್ಧಶತಕ ಸಿಡಿಸಿದ್ದರೂ, ಬೆಂಚ್ ಸ್ಟ್ರೆಂಥ್ ಬಲಪಡಿಸುವ ದೃಷ್ಠಿಯಿಂದ ಮಯಾಂಕ್’ಗೆ ಅವಕಾಶ ನೀಡುವ ಸಾಧ್ಯತೆಯಿದೆ. ಹೀಗಾದರೆ, ರಾಹುಲ್ ನಾಲ್ಕನೇ ಕ್ರಮಾಂಕದಲ್ಲಿ ಆಡಬಹುದು. ಕಳೆದ ಪಂದ್ಯದಲ್ಲಿ ಕೈಬೆರಳಿನ ಗಾಯಕ್ಕೆ ತುತ್ತಾಗಿದ್ದ ಧೋನಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. 

ವಿಶ್ವಕಪ್ 2019: ಯಾರಿಗೆ ಯಾರು ಸೆಮೀಸ್ ಎದುರಾಳಿ?

* ರವೀಂದ್ರ ಜಡೇಜಾ: ಮೊದಲ 8 ಪಂದ್ಯಗಳಲ್ಲೂ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದರು. ಆದರೆ ಬದಲಿ ಆಟಗಾರನಾಗಿ ಕ್ಷೇತ್ರ ರಕ್ಷಣೆಯಲ್ಲಿ ಕಾಣಿಸಿಕೊಂಡಿದ್ದರು. ಬ್ಯಾಟಿಂಗ್,ಬೌಲಿಂಗ್ ಹಾಗೂ ಕ್ಷೇತ್ರ ರಕ್ಷಣೆಯಲ್ಲಿ ಮಿಂಚಿನ ಪ್ರದರ್ಶನ ತೋರುವ ಸಾಮರ್ಥ್ಯ ಹೊಂದಿರುವ ಜಡೇಜಾ ಇಂದು ತಂಡದಲ್ಲಿ ಸ್ಥಾನಗಿಟ್ಟಿಸಿಕೊಳ್ಳವ ಸಾಧ್ಯತೆಯಿದೆ. ಹೀಗಾದರೆ ದಿನೇಶ್ ಕಾರ್ತಿಕ್ ತಂಡದಿಂದಹೊರಗುಳಿಯ ಬೇಕಾಗಬಹುದು.

ಇದರ ಹೊರತಾಗಿಯೂ ಕೊಹ್ಲಿ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲದೇ ಕಣಕ್ಕಿಳಿಯಬಹುದು. 

ಈ ಸಂದರ್ಭದಲ್ಲಿ ಸುವರ್ಣನ್ಯೂಸ್ ಪಟ್ಟಿ ಮಾಡಿದ ಸಂಭಾವ್ಯ ಟೀಂ ಇಂಡಿಯಾ ಇಲ್ಲಿದೆ ನೋಡಿ.. 

ಭಾರತ ತಂಡ: ರೋಹಿತ್ ಶರ್ಮಾ, ಮಯಾಂಕ್ ಅಗರ್‌ವಾಲ್, ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜುವೇಂದ್ರ ಚಹಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ.

ಸ್ಥಳ: ಲೀಡ್ಸ್
ಪಂದ್ಯ ಆರಂಭ: ಮಧ್ಯಾಹ್ನ 03 ಗಂಟೆಗೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್