ಲೀಡ್ಸ್(ಜು.06): ವಿಶ್ವಕಪ್ ಲೀಗ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ 7 ವಿಕೆಟ್ ಗೆಲುವು ಸಾಧಿಸಿದೆ. ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಶತಕದ ನೆರವಿನಿಂದ ಟೀಂ ಇಂಡಿಯಾ 3 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ದಾಖಲೆ ಬರೆದಿದೆ.

ಇದನ್ನೂ ಓದಿ: ಶ್ರೀಲಂಕಾ ವಿರುದ್ಧ ಭರ್ಜರಿ ಗೆಲುವು; ಸೆಮೀಸ್‌ನಲ್ಲಿ ಭಾರತದ ಎದುರಾಳಿ ಯಾರು?

ಏಕದಿನ ಕ್ರಿಕೆಟ್‌ನಲ್ಲಿ  ಶ್ರೀಲಂಕಾ ವಿರುದ್ದ ಭಾರತಕ್ಕಿದು 91ನೇ ಗೆಲುವು. ಏಕದಿನ ಕ್ರಿಕೆಟ್‌ನಲ್ಲಿ ಒಂದು ತಂಡದ ವಿರುದ್ಧ ಗರಿಷ್ಠ ಗೆಲುವು ದಾಖಲಿಸಿದ ಪಟ್ಟಿಯಲ್ಲಿ ಇದೀಗ ಭಾರತ ಹಾಗೂ ಆಸ್ಟ್ರೇಲಿಯಾ ಜಂಟಿಯಾಗಿ ಮೊದಲ ಸ್ಥಾನ ಹಂಚಿಕೊಂಡಿದೆ.

ಇದನ್ನೂ ಓದಿ: ಲಂಕಾ ವಿರುದ್ಧ ರೋಹಿತ್ ಸೆಂಚುರಿ; ಸಚಿನ್, ಸಂಗಕ್ಕಾರ ದಾಖಲೆ ಪುಡಿ ಪುಡಿ!

ಒಂದು ತಂಡದ ವಿರುದ್ಧ ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ ಗೆಲುವು
91 ಆಸ್ಟ್ರೇಲಿಯಾ vs ನ್ಯೂಜಿಲೆಂಡ್
91 ಭಾರತ vs ಶ್ರೀಲಂಕಾ 
90  ಪಾಕಿಸ್ತಾನ vs ಶ್ರೀಲಂಕಾ
82 ಆಸ್ಟ್ರೇಲಿಯಾ vs ಇಂಗ್ಲೆಂಡ್
77 ಆಸ್ಟ್ರೇಲಿಯಾ vs ಭಾರತ