ಲಂಡನ್(ಜೂ.28): ವಿಶ್ವಕಪ್ ಟೂರ್ನಿ ಆಡುತ್ತಿರುವ ಟೀಂ ಇಂಡಿಯಾದ ನೂತನ ಜರ್ಸಿ ಅನಾವರಣ ಮಾಡಲಾಗಿದೆ. ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕಾಗಿ ಬಿಸಿಸಿಐ ಇದೀಗ ಆರೆಂಜ್ ಕಲರ್ ಜರ್ಸಿ ಅನಾವರಣ ಮಾಡಿದೆ. ಕಾಂಗ್ರೆಸ್ ಸೇರಿದಂತೆ ಹಲವು ರಾಜಕೀಯ ಮುಖಂಡರು ಟೀಂ ಇಂಡಿಯಾವನ್ನು ಕೇಸರಿ ಮಯ ಮಾಡಲಾಗುತ್ತಿದೆ ಎಂದು ವಿರೋಧ ವ್ಯಕ್ತಪಡಿಸಿದ್ದರು. ಆದರೆ ಐಸಿಸಿ ನಿಯಮದಂತೆ, ಭಾರತೀಯ ಕ್ರಿಕೆಟ್ ಮಂಡಳಿ ನೂತನ ಜರ್ಸಿ ಬಿಡುಗಡೆ ಮಾಡಿದೆ. ಈ ಕುರಿತು ಅಭಿಮಾನಿಗಳು ಭರ್ಜರಿ ಪ್ರತಿಕ್ರಿಯೆ ನೀಡಿದ್ದಾರೆ.