ನಾಟಿಂಗ್’ಹ್ಯಾಮ್[ಮೇ.31]: ಮಾಜಿ ಚಾಂಪಿಯನ್ಸ್ ಗಳಾದ ವೆಸ್ಟ್ ಇಂಡೀಸ್ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನಾಯಕ ಜೇಸನ್ ಹೋಲ್ಡರ್ ಫೀಲ್ಡಿಂಗ್ ಆಯ್ದುಕೊಂಡಿದೆ.

ಇಲ್ಲಿನ ನಾಟಿಂಗ್ ಹ್ಯಾಮ್ ಮೈದಾನದಲ್ಲಿ ನಡೆಯಲಿರುವ 12ನೇ ಆವೃತ್ತಿಯ ವಿಶ್ವಕಪ್ ಟೂರ್ನಿಯ ಎರಡನೇ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ಪಾಕಿಸ್ತಾನ ಪರ ಅನುಭವಿ ಕ್ರಿಕೆಟಿಗ ಶೋಯೆಬ್ ಮಲಿಕ್, ಯುವ ವೇಗಿ ಶಾಹೀನ್ ಅಫ್ರಿದಿ ಹಾಗೂ ಮೊಹಮದ್ ಹುಸ್ನೈನ್ ತಂಡದಿಂದ ಹೊರಗುಳಿದಿದ್ದಾರೆ. 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಬಳಿಕ ಪಾಕಿಸ್ತಾನ ಆಡಿದ 32 ಪಂದ್ಯಗಳಲ್ಲಿ 21 ಪಂದ್ಯಗಳಲ್ಲಿ ಸೋತಿದ್ದು, ಕೇವಲ 9 ಪಂದ್ಯಗಳಲ್ಲಿ ಮಾತ್ರ ಗೆಲುವಿನ ನಿಟ್ಟುಸಿರು ಬಿಟ್ಟಿದೆ. ಇನ್ನು 2 ಪಂದ್ಯಗಳಲ್ಲಿ ಯಾವುದೇ ಫಲಿತಾಂಶ ಬಂದಿರಲಿಲ್ಲ. 

ಇನ್ನು ವೆಸ್ಟ್ ಇಂಡೀಸ್ ತಂಡದಲ್ಲಿ ಸಂಪೂರ್ಣವಾಗಿ ಫಿಟ್ ಇಲ್ಲದ ಎವಿನ್ ಲೆವಿಸ್ ಹಾಗೂ ಶೆನಾನ್ ಗ್ಯಾಬ್ರಿಯಲ್ ತಂಡದಿಂದ ಹೊರಗುಳಿದಿದ್ದಾರೆ.

ತಂಡಗಳು ಹೀಗಿವೆ: 

ವೆಸ್ಟ್ ಇಂಡೀಸ್:

ಪಾಕಿಸ್ತಾನ: