Asianet Suvarna News Asianet Suvarna News

Har Ghar Tiranga: ಚಿಕ್ಕಮಗಳೂರಲ್ಲಿ 2 ಲಕ್ಷ ರಾಷ್ಟ್ರಧ್ವಜ ಹಾರಾಟ: ಡಿಸಿ ರಮೇಶ್

ಹರ್ ಘರ್ ತಿರಂಗಾ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲ ಮನೆ, ಉದ್ಯಮ ಸಂಸ್ಥೆಗಳು ಮತ್ತು ಸರ್ಕಾರಿ ಕಛೇರಿಗಳ ಮೇಲೆ ರಾಷ್ಟ್ರಧ್ವಜ 

2 Lakh National Flag Flying in Chikkamagaluru Says DC KN Ramesh grg
Author
Bengaluru, First Published Aug 3, 2022, 11:17 PM IST

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು(ಆ.03):  75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆ. 13ರಿಂದ 15ರವರೆಗೆ ಹರ್ ಘರ್ ತಿರಂಗಾ ಕಾರ್ಯಕ್ರಮದಡಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ 2 ಲಕ್ಷ ರಾಷ್ಟ್ರಧ್ವಜ ಹಾರಿಸಲಾಗುತ್ತಿದೆ. ಜಿಲ್ಲೆಯ ಜನತೆಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಕರೆ ನೀಡಿದ್ದು ಇದಕ್ಕಾಗಿ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ.  ಚಿಕ್ಕಮಗಳೂರು ಜಿಲ್ಲೆಯ ಎಲ್ಲ ಮನೆ, ಉದ್ಯಮ ಸಂಸ್ಥೆಗಳು ಮತ್ತು ಸರ್ಕಾರಿ ಕಛೇರಿಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಿದ್ದತೆ ಮಾಡಿಕೊಳ್ಳುತ್ತಿದೆ. ಈ ಸಂಬಂಧ ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ನೇತೃತ್ವದಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಗಿದೆ. 

ಸಭೆಯಲ್ಲಿ ಮಾತಾಡಿದ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಧ್ವಜ ಸಂಹಿತೆಗೆ ತಿದ್ದುಪಡಿ ತರಲಾಗಿದ್ದು, ಅದರಂತೆ ಹಗಲಿನಂತೆಯೇ ರಾತ್ರಿಯಲ್ಲಿಯೂ ರಾಷ್ಟ್ರಧ್ವಜ ಹಾರಿಸುವ ಅವಕಾಶ ನೀಡಲಾಗಿದೆ. ಅದೇ ರೀತಿ ಪ್ಲಾಸ್ಟಿಕ್ ಹೊರತುಪಡಿಸಿ ಬೇರೆ ಯಾವುದೇ ವಸ್ತುಗಳಿಂದ ತಯಾರಿಸಿದ ಧ್ವಜವನ್ನು ಬಳಸಬಹುದಾಗಿದೆ. ಹಾಗಾಗಿ ಶಾಲೆ-ಕಾಲೇಜುಗಳು, ಗ್ರಾ.ಪಂ ಕಾರ್ಯಾಲಯ, ಆರೋಗ್ಯ ಕೇಂದ್ರಗಳು, ಅಂಗನವಾಡಿಗಳು ಸೇರಿದಂತೆ ಎಲ್ಲಾ ಮನೆ, ಉದ್ಯಮ, ವಾಣಿಜ್ಯ ಸಂಸ್ಥೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ಅವರು ಕರೆ ನೀಡಿದರು.ಧ್ವಜಗಳನ್ನು ಖರೀದಿಸಿ ಅವುಗಳನ್ನು ಉಚಿತವಾಗಿ ಸರಬರಾಜು ಮಾಡುವಂತೆ ಎಲ್ಲಾ ಗ್ರಾಮ ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳು, ವಿವಿದ ಇಲಾಖೆಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ಸಂಬಂಧಪಟ್ಟ ಇಲಾಖೆಗಳು ಸಹಕಾರದೊಂದಿಗೆ ಧ್ವಜಗಳನ್ನು ಪಡೆದುಕೊಳ್ಳಬೇಕು. ಗ್ರಾ.ಪಂ.ಗಳ ಮೂಲಕ 1 ಲಕ್ಷ ಧ್ವಜ ಹಾಗೂ ನಗರ ಸಂಸ್ಥೆಗಳ ಮೂಲಕ 80ಸಾವಿರ ಧ್ವಜಗಳನ್ನು ಪೂರೈಸಲಾಗುತ್ತದೆ. ಜಿಲ್ಲೆಯಲ್ಲಿ 2 ಲಕ್ಷ ಧ್ವಜ ಹಾರಾಟದ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಅವರು ಹೇಳಿದರು.

SIDDARAMOTSAVA: ಸೂತಕದ ಮನೆಯಲ್ಲಿ ಸಂಭ್ರಮ ಎಷ್ಟು ಸರಿ: ಸಿ.ಟಿ.ರವಿ ಪ್ರಶ್ನೆ

ಆ. 13ರಿಂದ ಆ. 15 ರ ಸಂಜೆ ತನಕ 

ಆ. 13ರ ಬೆಳಿಗ್ಗೆ 6 ಗಂಟೆಯಿಂದ ಆ. 15ರ ಸಂಜೆ 6ರವರೆಗೆ ನಿರಂತರವಾಗಿ ರಾಷ್ಟ್ರಧ್ವಜ ಹಾರಿಸಲು ಅವಕಾಶ ನೀಡಲಾಗಿದ್ದು, ಮನೆ ಅಥವಾ ಕಟ್ಟಡ ಮೇಲ್ಭಾಗದಲ್ಲಿ ಕಟ್ಟಬೇಕು ಜೊತೆಗೆ ಆ. 15ರ ನಂತರ ರಾಷ್ಟ್ರಧ್ವಜವನ್ನು ಇಳಿಸಿ ಸುರಕ್ಷಿತವಾಗಿಡಬೇಕು ಎಂದು ತಿಳಿಸಿ ಎಲ್ಲಾ ಕಚೇರಿಗಳು ಹಾಗೂ ಸರ್ಕಾರಿ ನೌಕರರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಉಸ್ತುವಾರಿ ನೋಡಿಕೊಳ್ಳಬೇಕು. ತಮ್ಮ ಇಲಾಖೆಯ ವ್ಯಾಪ್ತಿಯ ಸಾರ್ವಜನಿಕರಿಗೂ ಧ್ವಜಗಳನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.ಅಲ್ಲದೆ ಆಗಸ್ಟ್ 13ರಂದು ಜಿಲ್ಲಾ ಆಟದ ಮೈದಾನದಲ್ಲಿ ಬೃಹತ್ ಸಂಖ್ಯೆಯ ಸಾರ್ವಜನಿಕರನ್ನು ಒಳಗೊಂಡಂತೆ ರಾಷ್ಟ್ರಧ್ವಜ ಪ್ರದರ್ಶಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಜಿ.ಪಂ ಸಿಇಓ ಪ್ರಭು, ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಇದ್ದರು. 
 

Follow Us:
Download App:
  • android
  • ios