Asianet Suvarna News Asianet Suvarna News

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ: ಸಿಎಂ ಬಸವರಾಜ ಬೊಮ್ಮಾಯಿ ಭಾಷಣ

75ನೇ ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಈ ಸುಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವ ದಿನಾಚರಣೆ ಶುಭಾಶಯ ಕೋರಿದ ಸಿಎಂ ಬಸವರಾಜ ಬೊಮ್ಮಾಯಿ. ಇದೇ ವೇಳೆ ಮಹತ್ವದ ಹೊಸ ಯೋಜನೆ ಘೋಷಿಸಿದ ಸಿಎಂ

Independence amrit mahotsava cm basavaraj bommai speech banglore ra
Author
Bangalore, First Published Aug 15, 2022, 10:18 AM IST

 ಬೆಂಗಳೂರು (ಆ.15): ಭಾರತ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ಈ ಸಂಭ್ರಮದಲ್ಲಿ ನಾಡಿನ ಜನತೆಗೆ 76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಶುಭಾಶಯ ಕೊರಿದ ಸಿಎಂ ಬಸವರಾಜ ಬೊಮ್ಮಾಯಿ. ಇದೇ ವೇಳೆ ಹೊಸ ಯೋಜನೆ ಘೋಷಿಸಿದ ಸಿಎಂ.

ಸಿಎಂ ಬಸವರಾಜ ಬೊಮ್ಮಾಯಿ ಅವರ ಭಾಷಣದ ಮುಖ್ಯಾಂಶಗಳು:

  • ಓ ನಾಡ ಬಾಂಧವರೆ, ನಿಮಗೆಲ್ಲರಿಗೂ 76ನೇ ಸ್ವಾತಂತ್ರೋತ್ಸವದ ಹೃತ್ತೂವ೯ಕ ಶುಭಾಶಯಗಳು,
  • ಸ್ವಾತಂತ್ರ್ಯದ ಅಮೃತ ಮಹೋತ್ಸವದ ವರ್ಷಾಚರಣೆಯ ಈ ಸಂಭ್ರಮದಲ್ಲಿ ದೇಶವನ್ನು ಪರಕೀಯರ ದಾಸ್ಯದಿಂದ ಬಿಡುಗಡೆಗೊಳಿಸಲು ಹೋರಾಡಿದ ಮಹನೀಯರನ್ನು ನೆನೆಯುವುದು ನಮ್ಮ ಮೊದಲ ಕರ್ತವ್ಯವಾಗಿದೆ.
  •  ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅಸಂಖ್ಯಾತರು ತ್ಯಾಗ ಮತ್ತು ಬಲಿದಾನ ಮಾಡಿದ್ದಾರೆ. ಮಹಾತ್ಮಾ ಗಾಂಧೀಜಿ, ಸುಭಾಷ್ ಚಂದ್ರ ಬೋಸ್, ವಲ್ಲಭವಾಯಿ ಪಟೇಲ್, ಭಗತ್ ಸಿಂಗ್, ಅಬುಲ್ ಕಲಾಂ ಆಜಾದ್‌, ಜವಾಹರ್ ಲಾಲ್ ನೆಹರೂ ಮೊದಲಾದ ಮಹನೀಯರ ಹೋರಾಟ ಚರಿತ್ರಾರ್ಹವಾದುದು.
  • ಕನ್ನಡ ನಾಡಿನಲ್ಲಿ ಕಿತ್ತೂರು ವೀರರಾಣಿ ಚೆನ್ನಮ್ಮ, ವೀರ ಸಂಗೊಳ್ಳಿ ರಾಯಣ್ಣ ಮೊದಲಾದವರು ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ ಮೊದಲೇ ಸಾಮ್ರಾಜ್ಯಶಾಹಿ ಬ್ರಿಟೀಷರ ವಿರುದ್ಧ ನಡೆಸಿದ ಹೋರಾಟ ಮೈ ನವಿರೇಳಿಸುತ್ತದೆ. ಇವರೆಲ್ಲರ ತ್ಯಾಗದ ಫಲವಾಗಿ ದೊರೆತ ಸ್ವಾತಂತ್ರ್ಯದ ಸವಿಯುಣ್ಣುವ ಜೊತೆಗೆ ದೇಶದ ಉನ್ನತಿಗಾಗಿ ನಮ್ಮ ಕರ್ತವ್ಯವನ್ನು ಅರಿತು ನಿರ್ವಹಿಸುವುದೇ ಆ ಮಹನೀಯರ ತ್ಯಾಗಕ್ಕೆ ನಾವು ಸಲ್ಲಿಸುವ ನಿಜವಾದ ಗೌರವವಾಗಿದೆ.
  • ಸ್ವಾತಂತ್ರ್ಯದ 75 ವರ್ಷಗಳ ಅವಧಿಯಲ್ಲಿ ನಾವು ಎಷ್ಟೋ ಮೈಲಿಗಲ್ಲುಗಳನ್ನು ದಾಟಿದ್ದೇವೆ. ನೂರಾರು ಸವಾರಿ ಗಳನ್ನು ಎದುರಿಸಿದ್ದೇವೆ. ಸಮಸ್ಯೆಗಳನ್ನು ಮೆಟ್ಟಿ ನಿಂತಿದ್ದೇವೆ ನೆಳಲು-ಬೆಳಕುಗಳ ರೆಕ್ಕೆಯ ಬಿಚ್ಚುತ ಹಾರಾಡುವ ಧ್ವಜ ಒಂದೇ”
  •  ರಾಷ್ಟ್ರಕವಿ ಜಿ.ಎಸ್‌. ಶಿವರುದ್ರಪ್ಪನವರು ಹೇಳುವಂತೆ ವಿವಿಧ ಭಾಷೆ, ಸಂಸ್ಕೃತಿ, ಜೀವನಶೈಲಿಯಿದ್ದರೂ ಭಾರತೀಯತೆ ನಮ್ಮೆಲ್ಲರನ್ನೂ ಬೆಸೆಯುವ ಬಂಧವಾಗಿದೆ ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನ ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುವ ತಾಯಿ ಬೇರಾಗಿದೆ.
  •  ಈ ಏಕತೆಯನ್ನು ಸಾರಲು, ನಮ್ಮ ದೇಶಭಕ್ತಿಯನ್ನು ವ್ಯಕ್ತಪಡಿಸಲು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೀಡಿದ
  • ಕಲೆಗೆ ಸ್ಪಂದಿಸಿ, ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸುವ 'ಹರ್ ಘರ್ ತಿರಂಗ' ಅಭಿಯಾನವು ಅಭೂತಪೂರ್ವ ಯಶಸ್ಸು ಕಂಡಿದೆ. ಇದಕ್ಕಾಗಿ ನಾಡ ಬಾಂಧವರಿಗೆ ಕೃಶರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಈ ಕಾರ್ಯಕ್ರಮ ನಮ್ಮ ಅಮೃತ ಮಹೋತ್ಸವ ಸಂಭ್ರಮಕ್ಕೆ ಹೆಚ್ಚಿನ ಮೆರುಗು ನೀಡಿದೆ.
  • ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಎದುರಾದ ಕ್ಲಿಷ್ಟ ಸಮಸ್ಯೆಗಳನ್ನು, ಸವಾಲುಗಳನ್ನು ಬಗೆಹರಿಸಿ, ದೇಶವನ್ನು ಮುನ್ನಡೆಸಿದ ಎಲ್ಲ ಮಹನೀಯರ ಸೇವೆ ಶ್ಲಾಘನೀಯ. ಜನಸೇವೆಯನ್ನೇ ಬದುಕಾಗಿಸಿಕೊಂಡು ಭಾರತವನ್ನು ವಿಶ್ವ ಗುರುವಿನ ಸ್ಥಾನಕ್ಕೇರಿಸಲು ಅವಿರತವಾಗಿ ಶ್ರಮಿಸುತ್ತಿರುವ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ದೇಶದ ಅಭಿವೃದ್ಧಿಗೆ ಹೊಸ ದಿಕ್ಕು, ಹೊಸ ವೇಗ ನೀಡಿದ್ದಾರೆ. ಮಾರುಕಟ್ಟೆಯಲ್ಲಿ ಬೀದಿ ಬದಿ ವ್ಯಾಪಾರಿಯೂ ಡಿಜಿಟಲ್ ಹಣಕಾಸು ವ್ಯವಹಾರವನ್ನು ತನ್ನದಾಗಿಸಿಕೊಂಡು ಉನ್ನತಿಯನ್ನು ಕಾಣುತ್ತಿದ್ದಾನೆ. ಮಂಗಳನ ಅಂಗಳದಲ್ಲಿಯೂ ಭಾರತ ತನ್ನ ಹೆಜ್ಜೆ ಮೂಡಿಸಿದೆ. ಕೋವಿಡ್ 19 ರಿಂದ ಇಡೀ ವಿಶ್ವವೇ ತತ್ತರಿಸಿದ ಸಂದರ್ಭದಲ್ಲಿ ಮೋದಿ ಜಿ ಅವರು ತಮ್ಮ ನಾಯಕತ್ವ ಹಾಗೂ ಕರ್ತೃತ್ವ ಶಕ್ತಿಯಿಂದ ಭಾರತವನ್ನು ಸಮರ್ಥವಾಗಿ ಮುನ್ನಡೆಸಿದರು.
  • ಇದೀಗ ಕೋವಿಡ್' ಗ್ರಹಣ ಕಳೆದು ಮತ್ತೆ ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಯುವ ದಿನಗಳು ಬಂದಿವೆ. 
  • 75 ಅಮೃತ ಮಹೋತ್ಸವದ ಹಿನ್ನೆಲೆ ನಾವೆಲ್ಲ ಸಂಭ್ರಮ ಸಡಗರದಿಂದ ಆಚಾರಣೆ ಮಾಡ್ತಾ ಇದ್ದೇವೆ 
  • ಒಬ್ಬ ವ್ಯಕ್ತಿ ಯ ಜೀವನದಲ್ಲಿ 75 ವರ್ಷ ಹಿರಿಯ ವಯಸ್ಸು  ಒಂದು ದೇಶದ ಇತಿಹಾಸದಲ್ಲಿ ಇದು ಸುದೀರ್ಘ ಅನುಭವದಲ್ಲಿ ಯುವ ವಯಸ್ಸು ಆತ್ಮಲೋಕನ, ಸಿಂಹಾವಲೋಕನ , ಮಾಡುವಂತಹ ಸಮಯ  ಮ್ಮ ಭಾರತ ದೇಶಕ್ಕೆ ಅಮೃತಗಳಿಗೆ ಈಗ ಬಂದಿದೆ  ಈ ಸ್ವಾತಂತ್ರ್ಯ ಸುಲಭವಾಗಿ ಬಂದಿಲ್ಲ ಹಲವಾರು ಹೋರಾಟಗಳು ಸತ್ಯಾಗ್ರಹಗಳು ನಡೆದಿವೆ   ಹಲವಾರು ಹೋರಾಟಗಾರರು ತಮ್ಮ ಪ್ರಾಣ ಬಲಿದಾನ ಮಾಡಿದ್ದಾರೆ  ಬ್ರಿಟಿಷರ ಗುಂಡಿಗೆ ಬಲಿಯಾಗಿದ್ದಾರೆ  ಈ ಸ್ವಾತಂತ್ರ್ಯಕ್ಕಾಗಿ ಆಸ್ತಿ ಪಾಸ್ತಿಗಳನ್ನು ಕಳೆದುಕೊಂಡಿದ್ದಾರೆ  ತಿಹಾಸವನ್ನು ನೋಡಿದಾಗ ನಮಗೆ ತಿಳಿಯುತ್ತೆ 150 ಕ್ಕು ಹೆಚ್ಚು ಕಾಲ ಹಲವಾರು ಜನ ಪ್ರಾಣ ಬಲಿದಾನ ಮಾಡಿದ್ದಾರೆ.

ವಿಶೇಷ ಯೋಜನೆಗಳು ಘೋಷಿಸಿದ ಸಿಎಂ:

  • ಕಳೆದ ವರ್ಷ 75ನೇ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅರ್ಥ ಪೂರ್ಣ ಆಚರಣೆಯ ಉದ್ದೇಶದಿಂದ ಇದೇ ವೇದಿಕೆಯಲ್ಲಿ ಹಲವಾರು ಯೋಜನೆಗಳನ್ನು ಘೋಷಿಸಲಾಗಿತ್ತು. ಈ ಯೋಜನೆಗಳು ನಿಗದಿತ ವೇಳಾಪಟ್ಟಿಯಂತೆ ಅನುಷ್ಠಾನಗೊಳ್ಳುತ್ತಿರುವುದು ಸಂತೋಷದ ಸಂಗತಿ, ಈ ಯೋಜನೆಗಳು ಜನರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರಲು ನೆರವಾಗಲಿವೆ ಎಂಬ ವಿಶ್ವಾಸ ನನಗಿದೆ.
  • ಅಮೃತ ಶಾಲಾ ಸೌಲಭ್ಯದ ಯೋಜನೆ ಅ 150 ಸರ್ಕಾರಿ ಶಾಲೆಗಳಿಗೆ ತಲಾ ರೂ. 10 ಲಕ್ಷದಂತೆ 75 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಮೂಲಸೌಕರ್ಯಗಳಿಗಾಗಿ ಈಗಾಗಲೇ 74.68 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕಾಮಗಾರಿಗಳು ಪ್ರಗತಿಯಲ್ಲಿವೆ.
  • ಅಮೃತ ಆರೋಗ್ಯ ಮೂಲ ಸೌಲಭ್ಯದ ಯೋಜನೆ ಅಡಿಯಲ್ಲಿ 750 ಪ್ರಾಥಮಿಕ ಆರೋಗ್ಯ ಕೇಂದ್ರಗಳ (PHC) ಮೂಲಸೌಕರ್ಯಗಳ ವಿಸ್ತರಣೆ ಹಾಗೂ ಉನ್ನತೀಕರಣಕ್ಕಾಗಿ, ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಲಾ ರೂ. 20 ಲಕ್ಷದಂತೆ ಒಟ್ಟು 150 ಕೋಟಿ ರೂ. ಅನುದಾನ ಒದಗಿಸಲಾಗಿದೆ.
  • ಸ್ವಚ್ಚತೆ ಹಾಗೂ ಆರೋಗ್ಯಕರ ವಾತಾವರಣಕ್ಕೆ ಒತ್ತು:
  • 250 ಕೋಟಿ ವೆಚ್ಚದಲ್ಲಿ ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ 100 ರಷ್ಟು ಶೌಚಾಲಯ ನಿರ್ಮಾಣ.
  • ಕರ್ನಾಟಕ ಕರಕುಶನ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ ಬುಟ್ಟಿ  ಹೆಣೆಯುವವರು, ವಿಶ್ವಕರ್ಮರು, ಮಾದರು ಮತ್ತಿತರ ಕುಶಲ ಕರ್ಮಿಗಳಿಗೆ ತಲಾ 50 ಸಾವಿರ ರೂ ಸಾಲ ಸಹಾಯಧನ ಯೋಜನೆ..
  • ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ರೈತ ವಿದ್ಯಾನಿದಿ ಯೋಜನೆ ಸೌಲಭ್ಯ
  • ರಾಜ್ಯದಲ್ಲಿ ಹೊಸದಾಗಿ 4050 ಅಂಗನವಾಡಿ ತೆರೆಯುವ ಮೂಲಜ 16 ಲಕ್ಷ ಕುಟುಂಬಗಳ ಮಕ್ಕಳಿಗೆ ಪೌಷ್ಟಿಕ ಆಹಾರ
  • 8100 ಮಹಿಳೆಯರಿಗೂ ಇದರಿಂದ ಉದ್ಯೋಗಾವಾಕಾಶ ದೊರೆಯಲಿದೆ..
  • ಕರ್ತವ್ಯ ನಿರತ ಸೈನಿಕ ಮೃತಪಟ್ಟರೆ, ಆ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ.

 

Follow Us:
Download App:
  • android
  • ios