Har Ghar Tiranga: ಕೊಡಗಿನ ಮನೆ ಮನೆಗಳಲ್ಲಿ ರಾರಾಜಿಸಿದ ತ್ರಿವರ್ಣ ಧ್ವಜ

ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾದ್ಯಂತ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜ ರಾರಾಜಿಸಿತು. ಜಿಲ್ಲೆಯ ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್‌, ಕೆ.ಜಿ. ಬೋಪಯ್ಯ, ಎಂಎಲ್ಸಿ ಸುಜಾ ಕುಶಾಲಪ್ಪ ಅವರು ಕೂಡ ತಮ್ಮ ಮನೆಗಳಲ್ಲಿ ಧ್ವಜ ಹಾರಿಸಿದರು

The tricolor flag hoisted in the houses of Kodagu rav

ಮಡಿಕೇರಿ (ಆ.14) : ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾದ್ಯಂತ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜ ರಾರಾಜಿಸಿತು. ಜಿಲ್ಲೆಯ ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್‌, ಕೆ.ಜಿ. ಬೋಪಯ್ಯ, ಎಂಎಲ್ಸಿ ಸುಜಾ ಕುಶಾಲಪ್ಪ ಅವರು ಕೂಡ ತಮ್ಮ ಮನೆಗಳಲ್ಲಿ ಧ್ವಜ ಹಾರಿಸಿದರು. ಶಾಲೆಗಳಲ್ಲಿ ವಿದ್ಯಾರ್ಥಿಗಳು ಧ್ವಜ ಹಿಡಿದು ಮೆರವಣಿಗೆ ನಡೆಸಿ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಮಡಿಕೇರಿಯ ಇತಿಹಾಸ ಪ್ರಸಿದ್ಧ ಕೋಟೆ ಸೇರಿದಂತೆ ನಗರದಲ್ಲಿರುವ ಫೀಲ್ಡ… ಮಾರ್ಷಲ್‌ ಕೆ.ಎಂ.ಕಾರ್ಯಪ್ಪ, ಜನರಲ್‌ ಕೆ.ಎಸ್‌. ತಿಮ್ಮಯ್ಯ, ಮಂಗೇರಿರ ಮುತ್ತಣ್ಣ, ಸ್ಕಾ$್ವಡ್ರನ್‌ ಲೀಡರ್‌ ಅಜ್ಜಮಾಡ ದೇವಯ್ಯ, ಗುಡ್ಡೆಮನೆ ಅಪ್ಪಯ್ಯ ಗೌಡ ಅವರ ಪ್ರತಿಮೆ ಹಾಗೂ ರಾಷ್ಟ್ರಕವಿ ಕುವೆಂಪು ಪುತ್ಥಳಿಗೆ ನಗರಸಭೆ ವತಿಯಿಂದ ದೀಪಾ ಅಲಂಕಾರ ಮಾಡಲಾಗಿದೆ.

ಹರ್ ಘರ್ ತಿರಂಗ ಅಭಿಯಾನಕ್ಕೆ ಭರ್ಜರಿ ಸ್ಪಂದನೆ, ಪ್ರಧಾನಿ ಮೋದಿ ಸಂತಸ!

ಅಮೃತ ಮಹೋತ್ಸವಕ್ಕೆ ಸಂಭ್ರಮದ ಚಾಲನೆ:

ಶಾಲಾ - ಕಾಲೇಜು, ಗ್ರಾ.ಪಂ. ಮಠಗಳು, ವಿವಿಧ ಸಂಘ- ಸಂಸ್ಥೆಗಳು ಅಮೃತ ಮಹೋತ್ಸವಕ್ಕೆ ಸಡಗರ, ಸಂಭ್ರಮದಿಂದ ಚಾಲನೆ ನೀಡಿದರು. ಹಲವಾರು ಮನೆಗಳಲ್ಲಿ ಬೆಳಗ್ಗೆಯಿಂದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಧ್ವಜವನ್ನು ಹಾರಿಸಿದರು. ಶನಿವಾರಸಂತೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಹಿಂದೂಪರ ಸಂಘಟನೆ, ಬಿಜೆಪಿ ಕಾರ್ಯಕರ್ತರು ಪಟ್ಟಣದ ಕೆಆರ್‌ಸಿ ವೃತ್ತದಲ್ಲಿ ರಾಷ್ಟ್ರೀಯ ಧ್ವಜ ಹಿಡಿದುಕೊಂಡು ಚಾಲನೆ ನೀಡಿದರು. ಈ ಸಂದರ್ಭ ವಿವಿಧ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು. ನಂತರ ಕಾರ್ಯಕರ್ತರು ಆಟೋ ಚಾಲಕರಿಗೆ, ವರ್ತಕರಿಗೆ, ಮನೆಗಳಿಗೆ ತೆರಳಿ ರಾಷ್ಟ್ರಧ್ವಜ ವಿತರಿಸಿದರು.

ಕೊಡ್ಲಿಪೇಟೆ ಕಿರಿಕೊಡ್ಲಿ ಮಠದಲ್ಲಿ ಬೆಳಗ್ಗೆ 7 ಗಂಟೆಗೆ ಮಠಾಧೀಶ ಸದಾಶಿವಸ್ವಾಮೀಜಿ ಮಠದ ಮುಂಭಾಗದಲ್ಲಿ ಅಳವಡಿಸಿರುವ ಧ್ವಜ ಸ್ಥಂಭಕ್ಕೆ ರಾಷ್ಟ್ರೀಯ ಧ್ವಜಾರೋಹಣ ನೆರವೇರಿಸಿದ ಮೂಲಕ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿದರು. ಕೊಡ್ಲಿಪೇಟೆ ಕಲ್ಲುಮಠದ ಎಸ್‌ಕೆಎಸ್‌ ವಿದ್ಯಾಸಂಸ್ಥೆಯಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ವಿದ್ಯಾಸಂಸ್ಥೆ ಅಧ್ಯಕ್ಷ ಮಹಂತ ಸ್ವಾಮೀಜಿ ಧ್ಜಜಾರೋಹಣ ನೆರವೇರಿಸಿದರು. ವಿದ್ಯಾಸಂಸ್ಥೆ ನಿರ್ದೇಶಕರು ಹಾಜರಿದ್ದರು.

ಹರ್ ಘರ್ ತಿರಂಗಾ: ಮಸೀದಿ ಮೇಲೂ ಹಾರಿದ ರಾಷ್ಟ್ರಧ್ವಜ

ಮಾಲಂಬಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿದರು. ಶಾಲೆಯಲ್ಲಿ ಧ್ಜಜಾರೋಹಣ ನೆರವೇರಿದ ಬಳಿಕ ಶಾಲಾ ವಿದ್ಯಾರ್ಥಿಗಳು ರಾಷ್ಟ್ರೀಯ ಧ್ವಜವನ್ನು ಪ್ರದರ್ಶನಗೊಳಿಸಿದ ಮೂಲಕ ಅರಿವು ಮೂಡಿಸಿದರು.

Latest Videos
Follow Us:
Download App:
  • android
  • ios