ರಾಜ್ಯಸಭೆಗೆ ನಾಮನಿರ್ದೇಶನ: ಮೋದಿ ನನಗೆ ದೇಶಸೇವೆಯ ಅವಕಾಶ ಕೊಟ್ಟಿದ್ದಾರೆ: ವೀರೇಂದ್ರ ಹೆಗ್ಗಡೆ

Veerendra Heggade: ರಾಜ್ಯಸಭೆಗೆ ನಾಮನಿರ್ದೇಶನದ ಬಗ್ಗೆ ಧರ್ಮಸ್ಥಳದ ದೇವಸ್ಥಾನದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸಂತಸ ವ್ಯಕ್ತಪಡಿಸಿದ್ದಾರೆ. 

Narendra Modi gave me a chance to Serve nation Veerendra Heggade after nomination to Rajya Sabha mnj

ಮಂಗಳೂರು (ಜುಲೈ 6): ರಾಜ್ಯಸಭೆಗೆ ನಾಮನಿರ್ದೇಶನದ ಬಗ್ಗೆ ಧರ್ಮಸ್ಥಳದ ದೇವಸ್ಥಾನದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸಂತಸ ವ್ಯಕ್ತಪಡಿಸಿದ್ದಾರೆ.   "ರಾಜ್ಯಸಭೆ ನಾಮನಿರ್ದೇಶನದ ಮೂಲಕ ನನಗೆ ಮೋದಿಯವರು (Narendra Modi) ದೇಶಸೇವೆಯ ಅವಕಾಶ ಕೊಟ್ಟಿದ್ದಾರೆ, ಇದು ನಾಮನಿರ್ದೇಶನವಾದ ಕಾರಣ ಇದರಲ್ಲಿ ಯಾವುದೇ ಉತ್ಸಾಹದ ರಾಜಕಾರಣ ಇಲ್ಲ" ಎಂದಿದ್ದಾರೆ.  ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ (Veerendra Heggade), ಕೇರಳದ ಮಾಜಿ ಅಥ್ಲೀಟ್‌ ಪಿಟಿ ಉಷಾ (PT Usha) , ಆಂಧ್ರಪ್ರದೇಶದ ವಿ.ವಿಜಯೇಂದ್ರ ಪ್ರಸಾದ್‌ (V. Vijayendra Prasad ), ತಮಿಳುನಾಡಿನ ಇಳಯರಾಜ (Ilaiyaraaja) ಅವರನ್ನು ರಾಜ್ಯಸಭೆಗೆ (Rajya Sabha) ನಾಮನಿರ್ದೇಶನ ಮಾಡಲಾಗಿದೆ. 

ನಾಮ ನಿರ್ದೇಶನದ ಬಗ್ಗೆ ಮಾತನಾಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ " ನನ್ನ ಜೊತೆಗೆ ಬೇರೆ ಕ್ಷೇತ್ರದ ಪ್ರಖ್ಯಾತ ವ್ಯಕ್ತಿಗಳನ್ನ ಕೂಡ ಗುರುತಿಸಲಾಗಿದೆ,  ರಾಜ್ಯಸಭೆ ಅಂದ್ರೆ ಹಿರಿಯರ ವೇದಿಕೆ ಅಂತ ಅರ್ಥ,  ಹೀಗಾಗಿ ಬೇರೆಬೇರೆ ಕ್ಷೇತ್ರದಲ್ಲಿ ಸೇವೆ ಮಾಡಿದವರು ತಮ್ಮ ಅನುಭವ ಹಂಚಿಕೊಳ್ಳಬಹುದು,  ನಮ್ಮ ಸೀಮಿತ ಸೇವೆಯನ್ನ ದೇಶದಲ್ಲಿ ವಿಸ್ತರಿಸಲು ಅವಕಾಶ ನೀಡಲಾಗಿದೆ" ಎಂದು ಹೇಳಿದ್ದಾರೆ

"ನಾವು ಗ್ರಾಮೀಣಾಭಿವೃದ್ಧಿ ಯೋಜನೆ ಮಾಡಿದ್ದೇವೆ, ಇದು ಇಡೀ ದೇಶಕ್ಕೆ ವಿಸ್ತರಿಸುವ ಅವಶ್ಯಕತೆ ಇದೆ. ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ಧಾರ, ಶುದ್ದತೆ ಸೇರಿ ಅನೇಕ ಕೆಲಸ ಮಾಡಬಹುದು.  ರಾಜ್ಯ ಮಾತ್ರವಲ್ಲದೆ ಇಡೀ ದೇಶಾದ್ಯಂತ ಕೆಲಸ ಮಾಡಲು ಅವಕಾಶ ಇದೆ. ಈ ಅವಕಾಶ ಕೊಟ್ಟದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದʼ ಎಂದು ಅವರು ಹೇಳಿದ್ದಾರೆ. 

ಇದನ್ನೂ ಓದಿ: ವೀರೇಂದ್ರ ಹೆಗ್ಗಡೆ, ಪಿಟಿ ಉಷಾ, ವಿಜಯೇಂದ್ರ ಪ್ರಸಾದ್‌, ಇಳಯರಾಜ ರಾಜ್ಯಸಭೆಗೆ ನಾಮನಿರ್ದೇಶನ

ಪ್ರಧಾನಿ ಮೋದಿ ಟ್ವೀಟ್‌:  ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿ ಶುಭ ಕೋರಿದ್ದಾರೆ. "ವೀರೇಂದ್ರ ಹೆಗ್ಗಡೆಯವರು ಅತ್ಯುತ್ತಮ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಮತ್ತು ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿ ಅವರು ಮಾಡುತ್ತಿರುವ ಮಹತ್ತರವಾದ ಕಾರ್ಯವನ್ನು ವೀಕ್ಷಿಸಲು ನನಗೆ ಅವಕಾಶವಿದೆ. ಅವರು ಖಂಡಿತವಾಗಿಯೂ ಸಂಸತ್ತಿನ ಕಲಾಪಗಳನ್ನು ಪುಷ್ಟೀಕರಿಸುತ್ತಾರೆ" ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

 

Latest Videos
Follow Us:
Download App:
  • android
  • ios