Asianet Suvarna News Asianet Suvarna News

Maharashtra Hospital Fire | ಆಸ್ಪತ್ರೆಯಲ್ಲಿ ಅಗ್ನಿ ನರ್ತನ, ICUನಲ್ಲಿದ್ದ 10 ರೋಗಿಗಳು ಸಾವು!

* ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

* ಅಹ್ಮದ್‌ನಗರದ ಸಿವಿಲ್ ಆಸ್ಪತ್ರೆಯಲ್ಲಿ ಕಾಣಿಸಿಕೊಂಡ ಬೆಂಕಿ

* ಐಸಿಯುನಲ್ಲಿದ್ದ ಹತ್ತು ಕೊರೋನಾ ರೋಗಿಗಳು ಭಸ್ಮ

10 Patients Die In Fire At Covid Ward In Maharashtra Hospital pod
Author
Bangalore, First Published Nov 6, 2021, 2:12 PM IST

ಮುಂಬೈ(ನ.06): ಮಹಾರಾಷ್ಟ್ರದ (Maharshtra) ಅಹ್ಮದ್‌ನಗರದ ಸಿವಿಲ್ ಆಸ್ಪತ್ರೆಯ (Ahmednagar Civil Hospital) ಐಸಿಯು ವಾರ್ಡ್‌ನಲ್ಲಿ ಶನಿವಾರ ಬೆಳಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ತೀವ್ರತೆಗೆ 10 ರೋಗಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದೇ ವೇಳೆ ಹಲವರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಈ ಅಗ್ನಿ ಅನಾಹುತದಲ್ಲಿ ಮೃತಪಟ್ಟವರೆಲ್ಲರೂ ಕೊರೋನಾ ರೋಗಿಗಳು (Covid Patients) ಎಂಬುವುದು ಉಲ್ಲೇಖನೀಯ. ಅಪಘಾತದ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಉಳಿದ ರೋಗಿಗಳನ್ನು ತರಾತುರಿಯಲ್ಲಿ ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಅಗ್ನಿಶಾಮಕ ದಳದ ತಂಡಗಳು ಮತ್ತು ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

ವೆಂಟಿಲೇಟರ್‌ನಲ್ಲಿದ್ದ ರೋಗಿಗಳು, ಬೆಂಕಿ ಕಾಣಿಸಿದ್ದೇ ಎದ್ದು ಓಡಿದರು

ವಾಸ್ತವವಾಗಿ, ಈ ಬೆಂಕಿಯು ಐಸಿಯು ವಾರ್ಡ್‌ನಲ್ಲಿ (ICU Ward) ಬೆಳಿಗ್ಗೆ 11.30 ರ ಸುಮಾರಿಗೆ ಕಾಣಿಸಿಕೊಂಡಿದೆ. ಈ ಅವಘಡ ಸಂಭವಿಸಿದಾಗ ಆಸ್ಪತ್ರೆಯ ವಾರ್ಡ್‌ನಲ್ಲಿ ಸುಮಾರು 20 ರೋಗಿಗಳು ದಾಖಲಾಗಿದ್ದರು ಎನ್ನಲಾಗಿದೆ. ಎಲ್ಲಾ ರೋಗಿಗಳು ಗಂಭೀರ ಸ್ಥಿತಿಯಲ್ಲಿ ವೆಂಟಿಲೇಟರ್‌ನಲ್ಲಿದ್ದರು (Ventilator). ಬೆಂಕಿ ಅವಘಡ ಸಂಭವಿಸಿದ ತಕ್ಷಣ ಆಸ್ಪತ್ರೆಯಲ್ಲಿ ಅಲ್ಲೋಲಕಲ್ಲೋಲ ಉಂಟಾಗಿದ್ದು, ರೋಗಿಗಳು ಇತ್ತಿತ್ತ ಓಡಲಾರಂಭಿಸಿದ್ದಾರೆ. ಈ ವೇಳೆ ಆಡಳಿತ ಮಂಡಳಿ ಅವರನ್ನು ಬೇರೆ ಆಸ್ಪತ್ರೆಗೆ ರವಾನಿಸಿದೆ.

ನೋ ನೋಡುತ್ತಿದ್ದಂತೆಯೇ ವ್ಯಾಪಿಸಿದ ಬೆಂಕಿ

ಆಸ್ಪತ್ರೆಯಲ್ಲಿ ಅಗ್ನಿ ಅವಘಡ (Fire Tragedy) ಸಂಭವಿಸಲು ಕಾರಣವೇನು ಎಂಬುವುದು ಇನ್ನೂ ತಿಳಿದು ಬಂದಿಲ್ಲ. ಇದ್ದಕ್ಕಿದ್ದಂತೆ ಬೆಂಕಿ ಅದೆಷ್ಟು ಭೀಕರವಾಗಿ ಹರಡಿತು ಎಂದರೆ ಆಸ್ಪತ್ರೆಯ ಅಗ್ನಿಶಾಮಕ ವ್ಯವಸ್ಥೆಯಿಂದಲೂ ಅದನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಇದಾದ ಬಳಿಕ ಅಹಮದ್‌ನಗರ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಎಂಐಡಿಸಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಕರೆಸಲಾಯಿತು. ಸದ್ಯ ಅಗ್ನಿಶಾಮಕ ದಳ ಹಾಗೂ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಘಟನೆ ನಡೆದಿರುವುದನ್ನು ಖಚಿತಪಡಿಸಿದ ಜಿಲ್ಲಾಧಿಕಾರಿ

ಈ ಭೀಕರ ಅಪಘಾತವನ್ನು ಅಹಮದ್‌ನಗರ ಜಿಲ್ಲಾಧಿಕಾರಿ ರಾಜೇಂದ್ರ ಭೋಸಲೆ ಖಚಿತಪಡಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ನೀಡಿದ ಅವರು, ಮೃತಪಟ್ಟವರೆಲ್ಲರೂ ಕೊರೋನಾ ಪಾಸಿಟಿವ್ ಆಗಿದ್ದು, ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ದಾಖಲಾಗಿದ್ದವರು ಎಂದಿದ್ದಾರೆ. ಐಸಿಯುಗೆ ದಾಖಲಾದ ಅನೇಕ ರೋಗಿಗಳ ಸ್ಥಿತಿ ಗಂಭೀರವಾಗಿದೆ ಮತ್ತು ಅನೇಕರು ವೆಂಟಿಲೇಟರ್‌ಗಳಲ್ಲಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಅಂದಾಜಿಸಲಾಗಿದೆ. 

ಬೆಳಗ್ಗೆ 11 ಗಂಟೆಯ ಹೊತ್ತಿಗೆ ಬೆಂಕಿಯನ್ನು ನಂದಿಸಲಾಯಿತಾದರೂ ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ ಐಸಿಯು ಬೆಂಕಿಗೆ ಹೆಚ್ಚಿನ ಪ್ರಮಾಣದಲ್ಲಿ ಆಹುತಿಯಾಗಿದ್ದು ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಹಿರಿಯ ಪೊಲೀಸರು, ಅಗ್ನಿಶಾಮಕ ಅಧಿಕಾರಿಗಳು ಆಗಮಿಸಿದ್ದು ರಕ್ಷಣಾ ಮತ್ತು ಪರಿಹಾರ ಕಾರ್ಯಗಳ ನಿಗಾ ವಹಿಸುತ್ತಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು ತನಿಖೆ ನಡೆಸಲಾಗುತ್ತಿದೆ. 

ಉದ್ಯೋಗ ಖಾಯಂಮಾತಿ ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಮನವಿ ನೀಡಲು ಕೆಲವು ಆರೋಗ್ಯ ಕಾರ್ಯಕರ್ತರು ತೆರಳಿದ್ದ ಸಂದರ್ಭದಲ್ಲಿ ಅವರ ಬೆಂಗಾವಲು ಪಡೆ ತಡೆದ ಒಂದು ವಾರದ ನಂತರ ಈ ಮುಷ್ಕರ ನಡೆಯುತ್ತಿರುವುದಾಗಿ ವರದಿ ತಿಳಿಸಿದೆ. ಕೋವಿಡ್ 19 ಸೋಂಕು ಹರಡಿದ್ದ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹಲವರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿತ್ತು. ನಂತರ ಕೆಲವರು ಗುತ್ತಿಗೆ ಒಪ್ಪಂದದ ಅವಧಿ ಮುಗಿದ ನಂತರ ಕೆಲಸ ಕಳೆದುಕೊಂಡಿದ್ದರು. ಈ ಕಾರಣದಿಂದ ಪ್ರತಿಭಟನೆಗೆ ಮುಂದಾಗಿರುವುದಾಗಿ ವರದಿ ವಿವರಿಸಿದೆ.

Follow Us:
Download App:
  • android
  • ios