ಗಾಯಗೊಂಡಿದ್ದ ಎಲ್ಲರನ್ನೂ ಸ್ಥಳಾಂತರಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಬಹುತೇಕ ಪೂರ್ಣಗೊಂಡಿದೆ. ಎಸ್‌ಡಿಆರ್‌ಎಫ್ ತಂಡವೂ ಸ್ಥಳದಲ್ಲಿಯೇ ಇದೆ ಎಂದು ತಿಳಿದುಬಂದಿದೆ.

ಜಮ್ಮು (ಮೇ 30, 2023): ಜಮ್ಮು ಕಾಶ್ಮೀರದಲ್ಲಿ ಬೀಕರ ಬಸ್‌ ಅಪಘಾತವಾಗಿದ್ದು, 10 ಜನ ಮೃತಪಟ್ಟಿದ್ದಾರೆ. ಸೇತುವೆಯಿಂದ ಜಾರಿ ಕಮರಿಗೆ ಬಿದ್ದ ಪರಿಣಾಮ ವೈಷ್ಣೋದೇವಿಗೆ ಹೋಗ್ತಿದ್ದ ಪ್ರಯಾಣಿಕರು ಮೃತಪಟ್ಟಿದ್ದಾರೆ. ಈ ಪೈಕಿ 10 ಜನ ಮೃತಪಟ್ಟಿದ್ದು, ಸುಮಾರು 55 ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. 

ಇನ್ನು, ಗಾಯಗೊಂಡಿದ್ದ ಎಲ್ಲರನ್ನೂ ಸ್ಥಳಾಂತರಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಬಹುತೇಕ ಪೂರ್ಣಗೊಂಡಿದೆ. ಎಸ್‌ಡಿಆರ್‌ಎಫ್ ತಂಡವೂ ಸ್ಥಳದಲ್ಲಿಯೇ ಇದೆ ಎಂದು ತಿಳಿದುಬಂದಿದೆ. ಬಸ್‌ನಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಜಮ್ಮುವಿನ ಎಸ್‌ಎಸ್‌ಪಿ ಚಂದನ್‌ ಕೊಹ್ಲಿ ಸುದ್ದಿಸಂಸ್ಥೆ ಎಎನ್‌ಐಗೆ ಮಾಹಿತಿ ನೀಡಿದ್ದಾರೆ.

Scroll to load tweet…

ಇದನ್ನು ಓದಿ: ಅಪ್ರಾಪ್ತ ಬಾಲಕಿ ಮೇಲೆ ಹಲವು ಬಾರಿ ಗ್ಯಾಂಗ್‌ ರೇಪ್‌: ಕೃತ್ಯ ಸೆರೆ ಹಿಡಿದು ಕಾಮುಕರ ಬ್ಲ್ಯಾಕ್‌ಮೇಲ್‌

ಕಟ್ರಾಗೆ ತೆರಳುತ್ತಿದ್ದ ಬಸ್ ಜಜ್ಜರ್ ಕೋಟ್ಲಿ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಸ್ ಜಮ್ಮು ಮತ್ತು ಕಾಶ್ಮೀರದ ಹೊರಗಿನಿಂದ ಮಾತಾ ವೈಷ್ಣೋ ದೇವಿ ದೇಗುಲಕ್ಕೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿತ್ತು. ತ್ರಿಕೂಟ ಬೆಟ್ಟಗಳ ಮೇಲಿರುವ ಪ್ರಸಿದ್ಧ ದೇವಾಲಯಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಕಟ್ರಾ ಬೇಸ್‌ ಕ್ಯಾಂಪ್‌ ಆಗಿದೆ.

ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಗಾಯಾಳುಗಳನ್ನು ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Honour Killing: ಪ್ರೀತಿ ಮಾಡಿದ್ದೇ ತಪ್ಪಾಯ್ತಾ..? ಯುವತಿಗೆ ಕುಟುಂಬಸ್ಥರಿಂದ ತೀವ್ರ ಚಿತ್ರಹಿಂಸೆ, ಸಜೀವ ದಹನ

ಮೇ 21 ರಂದು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಮಾತಾ ವೈಷ್ಣೋ ದೇವಿ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ರಾಜಸ್ಥಾನಕ್ಕೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿ 27 ವರ್ಷದ ಮಹಿಳೆ ಮೃತಪಟ್ಟಿದ್ದರು ಮತ್ತು 24 ಜನರು ಗಾಯಗೊಂಡಿದ್ದರು.

ಡಿವೈಡರ್‌ಗೆ ಕಾರು ಡಿಕ್ಕಿ: 7 ವಿದ್ಯಾರ್ಥಿಗಳ ಸಾವು
ಗುವಾಹಟಿ: ಕಾಲೇಜಿಗೆ ತೆರಳುತ್ತಿದ್ದ ವೇಳೆ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು 7 ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿ ಸೋಮವಾರ ನಡೆದಿದೆ. ಮೃತರು ಅಸ್ಸಾಂ ಎಂಜಿನಿಯರಿಂಗ್‌ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದ ಬಳಿಕ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ 6 ಜನರು ಗಾಯಗೊಂಡಿದ್ದು ಈ ಪೈಕಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಇದನ್ನೂ ಓದಿ: ಮತ್ತೊಂದು ಲವ್ ಜಿಹಾದ್‌ ಕೇಸ್‌: ಗರ್ಭಿಣಿಗೆ ಮತಾಂತರಕ್ಕೆ ಒತ್ತಾಯಿಸಿ ವಿಷ ಹಾಕಿ ಕೊಂದ ಪಾಪಿಗಳು!