ಇತ್ತೀಚೆಗೆ ಉತ್ತರಾಖಂಡದ ಕೆಲವು ಸರ್ಕಾರಿ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದ ಘಟನೆಗಳು ನಡೆದಿದ್ದವು. ಇದರಿಂದ ಎಚ್ಚೆತ್ತಿರುವ ರಾಜ್ಯ ಸರ್ಕಾರ ಈ ರೀತಿ ಪರೀಕ್ಷಾ ಅಕ್ರಮಕ್ಕೆ ಸಹಾಯ ಮಾಡಿದವರಿಗೆ ಜೀವಾವಧಿ ಶಿಕ್ಷೆ ವಿಧಿಸುವ ಕಠಿಣ ಕಾನೂನು ತರಲು ತೀರ್ಮಾನಿಸಿದೆ.
ಡೆಹ್ರಾಡೂನ್: ಇತ್ತೀಚೆಗೆ ಉತ್ತರಾಖಂಡದ ಕೆಲವು ಸರ್ಕಾರಿ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದ ಘಟನೆಗಳು ನಡೆದಿದ್ದವು. ಇದರಿಂದ ಎಚ್ಚೆತ್ತಿರುವ ರಾಜ್ಯ ಸರ್ಕಾರ ಈ ರೀತಿ ಪರೀಕ್ಷಾ ಅಕ್ರಮಕ್ಕೆ ಸಹಾಯ ಮಾಡಿದವರಿಗೆ ಜೀವಾವಧಿ ಶಿಕ್ಷೆ ವಿಧಿಸುವ ಕಠಿಣ ಕಾನೂನು ತರಲು ತೀರ್ಮಾನಿಸಿದೆ. ಈ ಕುರಿತು ಭಾನುವಾರ ಚಂಪಾವತ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಕಲು ಮಾಡಲು ಸಹಾಯ ಮಾಡುವ ತಪ್ಪಿತಸ್ಥರಿಗೆ ಜೀವಾವಧಿ ಶಿಕ್ಷೆ ವಿಧಿಸುವ ಕಾನೂನು ರೂಪಿಸಲು ನಿರ್ಧರಿಸಲಾಗಿದೆ. ಜತೆಗೆ ಇಂತಹ ವಂಚನೆಗೆ ಅಭ್ಯರ್ಥಿಗಳಿಗೆ ಸಹಾಯ ಮಾಡಿದವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ ಎಂದರು.
ಅಲ್ಲದೇ ಅಕ್ರಮ ವಿಧಾನಗಳ ಮೂಲಕ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ 10 ವರ್ಷಗಳ ಕಾಲ ಯಾವುದೇ ಪರೀಕ್ಷೆಗೆ ಹಾಜರಾಗದಂತೆ ಅನರ್ಹಗೊಳಿಸಲಾಗುತ್ತದೆ ಎಂದು ಹೇಳಿದರು. ಸಂಪುಟವು ಜ.13ರಂದು ಕಠಿಣ ಕಾನೂನು ತರಲು ನಿರ್ಧರಿಸಿತ್ತು. ಈಗ ಧಾಮಿ ಅದರಲ್ಲಿ ಇರಬಹುದಾದ ಅಂಶಗಳ ಬಗ್ಗೆ ಹೇಳಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಮೇಲೆ ಉತ್ತರಾಖಂಡ ರಾಜ್ಯ ಲೋಕಸೇವಾ ಆಯೋಗದ ಸೆಕ್ಷನ್ ಆಫೀಸರ್ ಸೇರಿ ಐವರನ್ನು ಇತ್ತೀಚೆಗೆ ಬಂಧಿಸಲಾಗಿತ್ತು.
ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಪ್ರಕರಣ; ಮತ್ತೆ ನಾಲ್ವರ ಬಂಧನ ಬಂಧಿತರ ಸಂಖ್ಯೆ 33ಕ್ಕೆ ಏರಿಕೆ!
