ಮುಂಬೈ(ಎ.05): ಮಹಾರಾಷ್ಟ್ರ ಮೈತ್ರಿ ಸರ್ಕಾರದ ಮೇಲೆ ಕೇಳಿ ಬಂದ ಗಂಭೀರ ಆರೋಪ 100 ಕೋಟಿ ರೂಪಾಯಿ ಹಫ್ತಾ ವಸೂಲಿ ಪ್ರಕರಣದಲ್ಲಿ ಮೊದಲ ವಿಕೆಟ್ ಬಿದ್ದಿದೆ. ಹಫ್ತಾ ವಸೂಲಿ ಪ್ರಕರಣ ಕುರಿತು ಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

100 ಕೋಟಿ ಹಫ್ತಾ ಹಗರಣ: ಮಹಾರಾಷ್ಟ್ರ ಸರ್ಕಾರ ತಲ್ಲಣ!.

ಮಹಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಗೃಹ ಸಚಿವ ದೇಶ್‌ಮುಖ ತಮ್ಮ ರಾಜೀನಾಮೆ ಪತ್ರ ನೀಡಿದ್ದಾರೆ. ಉದ್ಧವ್ ಠಾಕ್ರೆ ರಾಜೀನಾಮೆ ಪತ್ರ ಪಡೆದುಕೊಂಡಿದ್ದಾರೆ. ಆದರೆ ಇನ್ನೂ ಅಂಗೀಕಾರ ಮಾಡಿಲ್ಲ.ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಂ ಬೀರ್ ಸಿಂಗ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಮುಂಬೈ ಹೈಕೋರ್ಟ್, ಇದು ಗಂಭೀರ ಆರೋಪಗಳಾಗಿದೆ. ಹೀಗಾಗಿ 15 ದಿನದಲ್ಲಿ ಪ್ರಾಥಮಿಕ ತನಿಖೆ ನಡೆಸುವಂತೆ ಸಿಬಿಐಗೆ ಸೂಚನೆ ನೀಡಿದೆ. 

 

ಹೈಕೋರ್ಟ್ ಆದೇಶದ ಬೆನ್ನಲ್ಲೇ ಗೃಹ ಸಚಿವರ ರಾಜೀನಾಮೆಗೆ ಒತ್ತಡ ಹೆಚ್ಚಾಯಿತು. ಇತ್ತ ಉಚ್ಚ ನ್ಯಾಯಾಲಯವೇ ಸಿಬಿಐ ತನಿಖೆಗೆ ಆದೇಶಿಸಿದಾಗ, ಹುದ್ದೆಯಲ್ಲಿ ಮುಂದುವರಿಯಲು ಹೇಗೆ ಸಾಧ್ಯ? ಹೀಗಾಗಿ ತಕ್ಷಣವೇ ದೇಶ್‌ಮುಖ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪ್ರತಿ ತಿಂಗಳು 100 ಕೋಟಿ ರೂಪಾಯಿ ಹಫ್ತಾ ಸಂಗ್ರಹಿಸುವಂತೆ ಗೃಹ ಸಚಿವ ಟಾರ್ಗೆಟ್ ಮಾಡುತ್ತಿದ್ದರು ಅನ್ನೋ ಮಾಜಿ ಪೊಲೀಸ್ ಆಯುಕ್ತ ಪರಂ ಬೀರ್ ಸಿಂಗ್ ಆರೋಪ ಮೈತ್ರಿ ಸರ್ಕಾರದ ಬುಡ ಅಲ್ಲಾಡಿಸಿತ್ತು. ಈ ಕುರಿತು ಪರಂ ಬೀರ್ ಸಿಂಗ್ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ರಾಜ್ಯಪಾಲರಿಗೆ ಪತ್ರ ಬರೆದಿದ್ದರು.