ವಿಷದ ಇಂಜೆಕ್ಷನ್‌ ನೀಡಿ 100ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಹತ್ಯೆ ಮಾಡಿದ ಭೀಕರ ಘಟನೆ ಆಂಧ್ರಪ್ರದೇಶದ ರಾಜಧಾನಿ ಹೈದ್ರಾಬಾದ್ ಬಳಿ ನಡೆದಿದೆ. ರಾಜಧಾನಿ ಹೊರವಲಯದ ಯಚರಂ ಎಂಬ ಗ್ರಾಮದಲ್ಲಿ 100ಕ್ಕೂ ಹೆಚ್ಚು ನಾಯಿಗಳಿಗೆ ವಿಷ ಚುಚ್ಚಿ ಹತ್ಯೆ ಮಾಡಲಾಗಿದೆ

ಹೈದರಾಬಾದ್‌: ವಿಷದ ಇಂಜೆಕ್ಷನ್‌ ನೀಡಿ 100ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಹತ್ಯೆ ಮಾಡಿದ ಭೀಕರ ಘಟನೆ ಆಂಧ್ರಪ್ರದೇಶದ ರಾಜಧಾನಿ ಹೈದ್ರಾಬಾದ್ ಬಳಿ ನಡೆದಿದೆ.

ರಾಜಧಾನಿ ಹೊರವಲಯದ ಯಚರಂ ಎಂಬ ಗ್ರಾಮದಲ್ಲಿ

ರಾಜಧಾನಿ ಹೊರವಲಯದ ಯಚರಂ ಎಂಬ ಗ್ರಾಮದಲ್ಲಿ 100ಕ್ಕೂ ಹೆಚ್ಚು ನಾಯಿಗಳಿಗೆ ವಿಷ ಚುಚ್ಚಿ ಹತ್ಯೆ ಮಾಡಲಾಗಿದೆ ಎಂದು ಪ್ರಾಣಿದಯಾ ಕಾರ್ಯಕರ್ತರೊಬ್ಬರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಮೇರೆಗೆ ಯಚರಂನ ಸರಪಂಚ್‌ ಹಾಗೂ ಇನ್ನಿಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದರೆ ತಪಾಸಣೆ ವೇಳೆ 50 ನಾಯಿಗಳ ಶವ ಪತ್ತೆಯಾಗಿದೆ. ಉಳಿದ ನಾಯಿಗಳಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹನಮಕೊಂಡ ಮತ್ತು ಕಾಮರೆಡ್ಡಿ ಜಿಲ್ಲೆಗಳ ವ್ಯಾಪ್ತಿಯಲ್ಲಿ 300 ಮತ್ತು 200 ನಾಯಿ ಇದೇ ರೀತಿ ಹತ್ಯೆ

ಜ.6ರಂದು ತೆಲಂಗಾಣದ ಹನಮಕೊಂಡ ಮತ್ತು ಕಾಮರೆಡ್ಡಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಕ್ರಮವಾಗಿ 300 ಮತ್ತು 200 ನಾಯಿಗಳನ್ನು ಇದೇ ರೀತಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಒಟ್ಟು 14 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಅಧಿಕಾರಕ್ಕೆ ಬಂದರೆ ನಾಯಿಗಳನ್ನು ಹತ್ಯೆ ಮಾಡುವುದಾಗಿ ಚುನಾವಣೆ ವೇಳೆ ನೀಡಿದ್ದ ಭರವಸೆ ಈಡೇರಿಸಲು ನಾಯಿಗಳ ಹತ್ಯೆ ಮಾಡಲಾಗಿತ್ತು.