* ಹೈದರಾಬಾದ್‌ನಲ್ಲಿ ಬುಧವಾರ ಭಾರೀ ಅಗ್ನಿ ಅವಘಡ * ಅಗ್ನಿ ದುರಂತದಲ್ಲಿ 11 ಸಾವು, ಹಲವರಿಗೆ ಗಾಯ* ಘಟನೆಯಲ್ಲಿ ಹಲವರು ಸುಟ್ಟು ಕರಕಲು

ಹೈದರಾಬಾದ್(ಮಾ.23): ತೆಲಂಗಾಣದ ಹೈದರಾಬಾದ್‌ನಲ್ಲಿ ಬುಧವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಸಿಕಂದರಾಬಾದ್ ಪ್ರದೇಶದ ಮರದ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡು 11 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯ ನಂತರ ಎಲ್ಲೆಡೆ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಕಿಯನ್ನು ನಿಯಂತ್ರಿಸುವ ಪ್ರಯತ್ನ ಮುಂದುವರಿದಿದೆ.

ಮೃತ 11 ಮಂದಿ ಬಿಹಾರದ ನಿವಾಸಿಗಳು. ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಎಲ್ಲಾ ಕೆಲಸಗಾರರು ಮೊದಲ ಮಹಡಿಯಲ್ಲಿ ಮಲಗಿದ್ದರು. ಸ್ಥಳೀಯ ಆಡಳಿತವು ಮೃತರ ಕುಟುಂಬಗಳನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದೆ ಇದರಿಂದ ಅವರ ದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಬಹುದು. ಘಟನೆಯ ಕಾರಣ ಏನೆಂದು ತಿಳಿಯಲು ಆಡಳಿತವು ತನಿಖೆ ನಡೆಸುತ್ತಿದೆ.