ಜಲಗಾಂವ್ ಜಿಲ್ಲೆಯ ಮಹೆಜಿ ಮತ್ತು ಪರ್ದಾಡೆ ರೈಲು ನಿಲ್ದಾಣಗಳ ನಡುವೆ ಬುಧವಾರ ಸಂಜೆ 5 ಗಂಟೆಗೆ ಅಪಘಾತ ಸಂಭವಿಸಿದೆ. ಮೃತರ ಕುಟುಂಬಕ್ಕೆ ಮಹಾರಾಷ್ಟ್ರ ಸರ್ಕಾರ 5 ಲಕ್ಷ ರು. ಪ್ರಕಟಿಸಿದೆ ಹಾಗೂ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸಿದೆ. ಸಾವಿನ ಸಂಖ್ಯೆ ಇನ್ನೂ ಏರುವ ಆತಂಕವಿದೆ.
ಜಲಗಾಂವ್(ಜ.23): ಮತ್ತೊಂದು ಭೀಕರ ರೈಲು ಅವಘಡ ಸಂಭವಿಸಿದೆ. ಮಹಾರಾಷ್ಟ್ರದ ಜಲಗಾಂವ್ ಬಳಿ ತಾವಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹರಡಿದ ಕಾರಣ, ಆ ರೈಲಿನಿಂದ ಜಿಗಿದು ಕೆಳಗೆ ನಿಂತಿದ್ದ ಪ್ರಯಾಣಿಕರ ಮೇಲೆ ಪಕ್ಕದ ಹಳಿ ಮೇಲೆ ಬಂದ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಹರಿದಿದೆ. ಆಗ 12 ಜನರು ದಾರುಣ ರೀತಿಯಲ್ಲಿ ಮೃತಪಟ್ಟು 50ಕ್ಕೂ ಹೆಚ್ಚಿನ ಜನರು ಗಾಯಗೊಂಡಿದ್ದಾರೆ.
ಜಲಗಾಂವ್ ಜಿಲ್ಲೆಯ ಮಹೆಜಿ ಮತ್ತು ಪರ್ದಾಡೆ ರೈಲು ನಿಲ್ದಾಣಗಳ ನಡುವೆ ಬುಧವಾರ ಸಂಜೆ 5 ಗಂಟೆಗೆ ಅಪಘಾತ ಸಂಭವಿಸಿದೆ. ಮೃತರ ಕುಟುಂಬಕ್ಕೆ ಮಹಾರಾಷ್ಟ್ರ ಸರ್ಕಾರ 5 ಲಕ್ಷ ರು. ಪ್ರಕಟಿಸಿದೆ ಹಾಗೂ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸಿದೆ. ಸಾವಿನ ಸಂಖ್ಯೆ ಇನ್ನೂ ಏರುವ ಆತಂಕವಿದೆ.
ಪುಷ್ಪಕ್ ಎಕ್ಸ್‌ಪ್ರೆಸ್- ಕರ್ನಾಟಕ ಎಕ್ಸ್‌ಪ್ರೆಸ್ ದುರಂತ; ಪ್ರಯಾಣಿಕರ ಮೇಲೆ ಹರಿದ ರೈಲು
ಆಗಿದ್ದೇನು?:
ಲಖನೌನಿಂದ ಮುಂಬೈಗೆ ಬರುತ್ತಿದ್ದ ಪುಷ್ಪಕ್ ಎಕ್ಸ್‌ಪ್ರೆಸ್‌ನ ಜನರಲ್ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹರಡಿ, ಪ್ರಯಾಣಿಕರು ಚೈನ್ ಎಳೆದು ರೈಲು ನಿಲ್ಲಿಸಿದ್ದರು. ಜನ ರೈಲಿನಿಂದ ಜಿಗಿದು ಪಕ್ಕದ ಹಳಿ (ಜೋಡಿ ಮಾರ್ಗದ ಇನ್ನೊಂದು ಹಳಿ) ಮೇಲೆ ಬಂದು ನಿಂತಿದ್ದರು. ಇನ್ನು ಕೆಲವರು ದೂರಕೆ ಹೋಗಿ ನಿಂತಿದರು. ಇದೇ ಪಕದ ಹಳಿ ಮೇಲೆ ಬೆಂಗಳೂರಿನಿಂದ ದಿಲ್ಲಿಗೆ ಹೋಗುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್ ಬಂದಿದೆ. ವೇಗದ ಕಾರಣವಾಗಿ ರೈಲು ನಿಯಂತ್ರಣಕ್ಕೆ ಸಿಗದೆ ಜನರ ಮೇಲೆ ಹರಿದಿದೆ. ಪರಿಣಾಮ ದುರ್ಘಟನೆ ನಡೆದಿದೆ.
ರೈಲ್ವೆ ಹೇಳಿದ್ದೇನು?:
ಮಧ್ಯ ರೈಲ್ವೆ ವಕ್ತಾರ ಸ್ವಪ್ಪಿಲ್ ನಿಲಾ ಮಾತನಾಡಿ, 'ಬ್ರೇಕ್ ಜಾಮ್ ಅಥವಾ ಹಾಟ್ ಆ್ಯಕ್ಸೆಲ್ ತಾಂತ್ರಿಕ ಕಾರಣದಿಂದ ಒಂದು ಕೋಚ್‌ನ ಗಾಲಿಗಳಲ್ಲಿ ಕಿಡಿಗಳು ಕಾಣಿಸಿಕೊಂಡಿವೆ. ಇದರಿಂದ ಭೀತಿಗೊಳಗಾದ ಪ್ರಯಾಣಿಕರು ಬೆಂಕಿ ಹೊತ್ತಿಕೊಂಡಿದೆ ಎಂದು ಭಾವಿಸಿ ಚೈನು ಎಳೆದಿದ್ದಾರೆ. ಆಗ ಕೆಲವರು ರೈಲಿಂದ ಜಿಗಿದು ಪಕ್ಕ ದ ರೈಲು ಮಾರ್ಗದ ಮೇಲೆ ನಿಂತಿದ್ದಾರೆ. ಆಗ ಅದೇ ವೇಳೆ ಕರ್ನಾಟಕ ಎಕ್ಸ್‌ಪ್ರೆಸ್ ಧಾವಿಸಿ ಹರಿದಿದೆ. ಚಾಲಕ ಬ್ರೇಕ್ ಹಾಕಲು ಯತ್ನಿಸಿದರೂ ಆಗಲಿಲ್ಲ. ಸ್ಥಳದಲ್ಲಿ ತಿರುವಿದ್ದು, ಇದರಿಂದ ರೈಲನ್ನು ನಿಯಂತ್ರಣಕ್ಕೆ ತರಲು ಆಗಲಿಲ್ಲ' ಎಂದಿದ್ದಾರೆ. ಸುರಕ್ಷತಾ ಆಯುಕ್ತ ತನಿಖೆ ನಡೆಸಲಿದ್ದಾರೆ.
ದೆಹಲಿ ಮೆಟ್ರೋದಲ್ಲಿ ₹40 ಲಕ್ಷ ನಗದು, 89 ಲ್ಯಾಪ್‌ಟಾಪ್‌ಗಳು 193 ಮೊಬೈಲ್‌ಗಳು ಪತ್ತೆ!
ಆಗಿದ್ದೇನು?
# ಲಖನೌನಿಂದ ಮುಂಬೈಗೆ ಹೊರಟಿದ್ದ ಪುಷ್ಪಕ್ ರೈಲಲ್ಲಿ ಬೆಂಕಿ ಹಬ್ಬಿದ ವದಂತಿ
# ಇದರಿಂದ ಆತಂಕಕ್ಕೆ ಒಳಗಾಗಿ ರೈಲಿನ ಜೈನ್ ಎಳೆದ ಪ್ರಯಾಣಿಕರು
# ರೈಲು ನಿಲ್ಲುತ್ತಲೇ ಕೆಳಗೆ ಇಳಿದು ಪಕ್ಕದ ಹಳಿ ಮೇಲೆ ನಿಂತ ಪ್ರಯಾಣಿಕರು
# ಈ ವೇಳೆ ಆ ಮಾರ್ಗದಲ್ಲಿ ವೇಗದಲ್ಲಿ ಬಂದ ಕರ್ನಾಟಕ ಎಕ್ಸ್‌ಪ್ರೆಸ್ ರೈಲು
# ವೇಗವಿದ್ದ ಕಾರಣ ನಿಯಂತ್ರಣ ಸಿಗದೇ ನಿಂತಿದ್ದವರ ಮೇಲೆ ಹರಿದ ರೈಲು
