ಸೇತುವೆಯ ಹಳಿ ಮುರಿದು ನರ್ಮದಾ ನದಿಗುರುಳಿದ ಬಸ್, 13 ಸಾವು, 15 ಜನರ ರಕ್ಷಣೆ!
ಪರಿಹಾರ ಮತ್ತು ರಕ್ಷಣಾ ಕಾರ್ಯ ಮುಂದುವರಿದಿದೆ.ಇದುವರೆಗೆ 15 ಜನರನ್ನು ರಕ್ಷಿಸಲಾಗಿದ್ದು, 13 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಬಸ್ಸಿನಲ್ಲಿ ಸುಮಾರು 40 ಮಂದಿ ಇದ್ದರು.
ಧಾರ್(ಜು.18): ಮಧ್ಯಪ್ರದೇಶದ ಧಾರ್ ಜಿಲ್ಲೆಯ ಇಂದೋರ್‌ನಿಂದ ಪುಣೆಗೆ ತೆರಳುತ್ತಿದ್ದ ಮಹಾರಾಷ್ಟ್ರ ರೋಡ್‌ವೇಸ್ ಬಸ್ ಖಾಲ್‌ಘಾಟ್ ಪ್ರದೇಶದಲ್ಲಿ ಸೇತುವೆಯ ಹಳಿ ಮುರಿದು ನರ್ಮದಾ ನದಿಗೆ ಬಿದ್ದಿದೆ. ಇದುವರೆಗೆ 15 ಜನರನ್ನು ರಕ್ಷಿಸಲಾಗಿದ್ದು, 13 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಬಸ್ಸಿನಲ್ಲಿ ಸುಮಾರು 40 ಮಂದಿ ಇದ್ದರು. ಪರಿಹಾರ ಮತ್ತು ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದ್ದು, ಮಳೆಯ ನಡುವೆಯೇ ರಭಸವಾಗಿ ಹರಿಯುತ್ತಿದ್ದ ನದಿಯಿಂದ ಬಸ್ ಅನ್ನು ಹೊರತೆಗೆಯಲಾಗಿದೆ.
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ಬೆಳಿಗ್ಗೆ ಖರ್ಗೋನ್‌ನ ಖಾಲ್‌ಘಾಟ್‌ನಲ್ಲಿ ಸಂಭವಿಸಿದ ಬಸ್ ಅಪಘಾತದ ಬಗ್ಗೆ ಮಾಃಇತಿ ಪಡೆದಿದ್ದಾರೆ. ಬಸ್ ನದಿಗೆ ಬಿದ್ದಿರುವ ಮಾಹಿತಿ ತಿಳಿದ ತಕ್ಷಣ ಆಡಳಿತಕ್ಕೆ ಮಾಹಿತಿ ರವಾನನಿಸಲಾಗಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದರು. ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದ್ದು, ಜಿಲ್ಲಾಡಳಿತ ಅಧಿಕಾರಿಗಳು ಸ್ಥಳದಲ್ಲಿ ಜಮಾಯಿಸಿದ್ದಾರೆ.
ಎಸ್‌ಡಿಆರ್‌ಎಫ್ ಕಳುಹಿಸಲು ಮುಖ್ಯಮಂತ್ರಿ ಸೂಚನೆ ನೀಡಿದ್ದು, ಹೆಚ್ಚುವರಿಯಾಗಿ ಅಗತ್ಯ ಸಂಪನ್ಮೂಲಗಳನ್ನು ಸ್ಥಳಕ್ಕೆ ಕಳುಹಿಸಲು ಸೂಚನೆ ನೀಡಲಾಗಿದೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ. ಖಾರ್ಗೋನ್, ಇಂದೋರ್ ಜಿಲ್ಲಾಡಳಿತದೊಂದಿಗೆ ಮುಖ್ಯಮಂತ್ರಿ ನಿರಂತರ ಸಂಪರ್ಕದಲ್ಲಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಹಳಿ ದಾಟುವಾಗ ಜಾರಿ ಬಿದ್ದ ವ್ಯಕ್ತಿಯ ಜೀವ ಕಾಪಾಡಿದ ಪೊಲೀಸ್, ವಿಡಿಯೋ ವೈರಲ್!
ಇಂದೋರ್‌ನಿಂದ ಪುಣೆಗೆ ಹೋಗುತ್ತಿದ್ದ ಮಹಾರಾಷ್ಟ್ರ ಸರ್ಕಾರದ "ಎಸ್‌ಟಿ" ಬಸ್ ಧಮ್ನೋಡ್ ಬಳಿಯ ಖಾಲ್‌ಘಾಟ್‌ನಲ್ಲಿ ನರ್ಮದಾ ನದಿಗೆ ಉರುಳಿದ್ದು ಅತ್ಯಂತ ದುಃಖಕರ ಮತ್ತು ನೋವಿನ ಅಪಘಾತವಾಗಿದೆ ಎಂದು ಮಧ್ಯಪ್ರದೇಶದ ಗೃಹ ಸಚಿವರು ಹೇಳಿದ್ದಾರೆ. ಎಲ್ಲಾ ಜವಾಬ್ದಾರಿಯುತ ಆಡಳಿತ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿದ್ದಾರೆ. ಎಲ್ಲಾ ರಕ್ಷಣಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. 15 ಮಂದಿಯನ್ನು ರಕ್ಷಿಸಲಾಗಿದೆ. ಅಪಘಾತಕ್ಕೆ ಕಾರಣವನ್ನು ಪತ್ತೆ ಹಚ್ಚಲಾಗುತ್ತಿದೆ.