ನವದೆಹಲಿ(ಡಿ.28): ಗಣರಾಜ್ಯೋತ್ಸವ ಮತ್ತು ಸೇನಾ ದಿನದ ಪಥಸಂಚಲನದಲ್ಲಿ ಭಾಗಿಯಾಗಲು ದೇಶದ ವಿವಿಧ ಭಾಗಗಳಿಂದ ದೆಹಲಿಗೆ ಆಗಮಿಸಿರುವ ಸುಮಾರು 150 ಸೈನಿಕರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಸೇನಾ ಮೂಲಗಳು ತಿಳಿಸಿವೆ. \

‘ಪಥಸಂಚಲನದಲ್ಲಿ ಭಾಗಿಯಾಗಲು ಆಗಮಿಸಿದ್ದ ಯೋಧರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಕೆಲವರಿಗೆ ಸೋಂಕು ದೃಢಪಟ್ಟಿದ್ದು, ಬಹುತೇಕರಲ್ಲಿ ಲಕ್ಷಣ ರಹಿತ ಸೋಂಕು ಪತ್ತೆಯಾಗಿದೆ. ಅವರೆಲ್ಲರನ್ನು ದೆಹಲಿ ಕಂಟೋನ್ಮೆಂಟ್‌ನಲ್ಲಿ ಕ್ವಾರಂಟೈನ್‌ ಮಾಡಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ಗಣರಾಜ್ಯೋತ್ಸವ ಮತ್ತು ಸೇನಾ ದಿನದ ಅಂಗವಾಗಿ ಸಾವಿರಾರು ಯೋಧರು ಪ್ರತಿವರ್ಷ ದೆಹಲಿಗೆ ಆಗಮಿಸುತ್ತಾರೆ. ಈ ಬಾರಿಯ ಗಣರಾಜ್ಯೋತ್ಸವಕ್ಕೆ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಮುಖ್ಯ ಅತಿಥಿಯಾಗಿದ್ದಾರೆ.

ಅಥಿತಿಯಾಗಿ ಆಹ್ವಾನಿಸಿದೆ. ಬ್ರಿಟನ್ನಿನಲ್ಲಿ ರೂಪಾಂತರಿ ಕೊರೋನಾ ವೈರಸ್‌ ಕಾಣಿಸಿಕೊಂಡ ಹೊರತಾಗಿಯೂ ಬೋರಿಸ್‌ ಅವರು ಭಾರತಕ್ಕೆ ಆಗಮಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ.