ರಾಜಕೀಯ ಹೈಡ್ರಾಮಾ: ಬೆಂಗಳೂರಿನಿಂದಲೇ 19 ಶಾಸಕರು ರಾಜೀನಾಮೆ
ಮಧ್ಯಪ್ರದೇಶದ ರಾಜಕೀಯ ಹೈಡ್ರಾಮ ಅಂತಿಮ ಹಂತಕ್ಕೆ ಬಂದು ತಲುಪಿದೆ. 25 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ನೀಡುತ್ತಿದ್ದಂತೆಯೇ ಬೆಂಗಳೂರಿನಿಂದಲೇ 19 ಶಾಸಕರು ರಾಜೀನಾಮೆ ನೀಡಿದ್ದಾರೆ.
ಬೆಂಗಳೂರು/ ಭೋಪಾಲ್, (ಮಾ.10): ಮಧ್ಯ ಪ್ರದೇಶದಲ್ಲಿ ಅಚ್ಚರಿಯ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಬಹುತೇಕ ಪಕ್ಕಾ ಆಗಿದೆ.
ಈಗಾಗಲೇ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ರಾಜೀನಾಮೆ ನೀಡುತ್ತಿದ್ದಂತೆಯೇ ಬೆಂಗಳೂರಿನಲ್ಲಿ ಠಿಕಾಣಿ ಹೂಡಿರುವ ಕಾಂಗ್ರೆಸ್ 19 ಶಾಸಕರು ರಾಜೀನಾಮೆ ನೀಡಿದ್ದಾರೆ.
ಕರ್ನಾಟಕ ಮಾದರಿಯಲ್ಲಿ ಮಧ್ಯಪ್ರದೇಶದಲ್ಲಿ ಆಪರೇಷನ್ ಕಮಲ, ಇದಕ್ಕೆ ರಾಜ್ಯ ನಾಯಕ ಸೂತ್ರಧಾರಿ?
ಬೆಂಗಳೂರಿನ ಮಾರತಹಳ್ಳಿಯ ಖಾಸಗಿ ಹೋಟೆಲ್‌ನಲ್ಲಿರುವ 19 ಶಾಸಕರು ತಮ್ಮ-ತಮ್ಮ ರಾಜೀನಾಮೆ ಪತ್ರವನ್ನ ಕೈಯಲ್ಲಿ ಹಿಡಿದು ಕುತಿರುವ ಫೋಟೋವನ್ನು ಬಿಡುಗಡೆ ಮಾಡಲಾಗಿದೆ.
ಈ ಮೂಲಕ ಬಿಜೆಪಿಯ ಆಪರೇಷನ್ ಕಮಲಕ್ಕೆ ಕಮಲ್ ನಾಥ್ ಸರ್ಕಾರ ಬಲಿಯಾಗುವುದು ಬಹುತೇಕ ಖಚಿತವಾಗಿದೆ.
ಸಿಂಧಿಯಾ ರಾಜಿನಾಮೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಉಳಿದುಕೊಂಡಿರುವ 19 ಕಾಂಗ್ರೆಸ್ ಶಾಸಕರೂ ತಮ್ಮ ಶಾಸಕ ಸ್ಥಾನಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ.
ಮಧ್ಯಪ್ರದೇಶ ಹೈಡ್ರಾಮಾ: ಬಂಡೆದ್ದ ಸಿಂಧಿಯಾ, 22 ಸಚಿವರ ರಾಜೀನಾಮೆ!
ಇನ್ನು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನಲೆಯಲ್ಲಿ ಸಿಂಧಿಯಾ ಸೇರಿ 19 ಶಾಸಕರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಮತ್ತೊಂದೆಡೆ ಕಾಂಗ್ರೆಸ್ ಹಾಲಿ 6 ಸಚಿವರನ್ನ ರಾಜೀನಾಮೆ ಕೊಡಿಸಿದ್ದು, ಬಿಜೆಪಿಯ ಕೆಲ ಶಾಸಕರುಗಳಿಗೆ ಗಾಳ ಹಾಕಿದೆ.