1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ದೋಷಿ:, ಮರಣದಂಡನೆ ಸಾಧ್ಯತೆ?
1984ರ ಸಿಖ್ ವಿರೋಧಿ ದಂಗೆಯಲ್ಲಿ ಇಬ್ಬರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ದೋಷಿ ಎಂದು ದೆಹಲಿ ನ್ಯಾಯಾಲಯ ತೀರ್ಪು ನೀಡಿದೆ. ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸುವ ಸಾಧ್ಯತೆ ಇದೆ.

ನವದೆಹಲಿ (ಫೆ.13): 1984ರಲ್ಲಿ ನಡೆದ ಸಿಖ್ ವಿರೋಧಿ ದಂಗೆ ವೇಳೆ ಸರಸ್ವತಿ ವಿಹಾರ್ ಪ್ರದೇಶದಲ್ಲಿ ನಡೆದ ಇಬ್ಬರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಬುಧವಾರ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಅವರಿಗೆ ಗರಿಷ್ಠ ಮರಣದಂಡನೆ ಅಥವಾ ಕನಿಷ್ಠ ಜೀವಾವಧಿ ಶಿಕ್ಷೆ ವಿಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆ ಬಳಿಕ ಸಿಖ್ ಸಮುದಾಯವನ್ನು ಗುರಿಯಾಗಿಸಿಕೊಂಡು ವ್ಯಾಪಕ ನರಮೇಧ ನಡೆಸಲಾಗಿತ್ತು. ಈ ದಂಗೆಯಲ್ಲಿ ಜಸ್ವಂತ್ ಸಿಂಗ್ ಹಾಗೂ ಅವರ ಮಗ ತರುಣ್‌ದೀಪ್ ಸಿಂಗ್ ಅವರನ್ನು 1984ರ ನ.01ರಂದು ಹತ್ಯೆ ಮಾಡಲಾಗಿತ್ತು.
ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳ ವಿರುದ್ಧ ಹೈಕೋರ್ಟ್ ಮೊರೆ ಹೋದ ನಿವೃತ್ತ ಜಡ್ಜ್!...
ಈ ಪ್ರಕರಣದಲ್ಲಿ ಸಜ್ಜನ್ ಕುಮಾರ್ ಪ್ರಮುಖ ಆರೋಪಿಯಾಗಿದ್ದರು. ಅವರ ವಿರುದ್ಧ ಹಲವು ಪ್ರಕರಣ ದಾಖಲಾಗಿತ್ತು. ಈಗಾಗಲೇ ಎರಡು ಪ್ರಕರಣದಲ್ಲಿ ಅವರು ದೋಷಿ ಎಂದು ಸಾಬೀತಾಗಿದ್ದು, ಇನ್ನೆರೆಡು ಪ್ರಕರಣಗಳ ತೀರ್ಪು ಹೊರಬರಬೇಕಿದೆ. ಸಜ್ಜನ್ ಪ್ರಸ್ತುತ ದೆಹಲಿ ಕಂಟೋನ್ಮೆಂಟ್‌ನಲ್ಲಿ ಅವರು ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ.

