ಲಕ್ನೋ(ಫೆ.13): ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಪರಿಣಾಮ ಮೂವರು ವಕೀಲರು ಗಾಯಗೊಂಡಿರುವ ಘಟನೆ ನಡೆದಿದೆ. 

ಲಕ್ನೋ ಬಾರ್ ಅಸೋಸಿಯೇಷನ್'ನ ಜಂಟಿ ಕಾರ್ಯದರ್ಶಿ ಸಂಜೀವ್ ಲೋಧಿಯವರನ್ನು ಗುರಿಯಾಗಿರಿಸಿ ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ.

ಹುಬ್ಬಳ್ಳಿ ರೈಲ್ವೆ ಬಾಂಬ್‌ ಸ್ಫೋಟ ಇನ್ನೂ ನಿಗೂಢ!

ಉತ್ತರಪ್ರದೇಶ ವಿಧಾನಸಭಗೆ ಕೆಲವೇ ದೂರಗಳಲ್ಲಿ ಇರುವ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ ಬಳಿ ಸ್ಫೋಟ ಸಂಭವಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಇನ್ನು ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಸ್ಥಳದಿಂದ ಇನ್ನೂ ಮೂರು ಜೀವಂತ ಬಾಂಬ್’ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.