ಕರ್ನಾಟಕ-ಕೇರಳ ಗಡೀಲಿ ಶೂಟೌಟ್‌: ಇಬ್ಬರು ನಕ್ಸಲರ ಬಂಧನ; ಮೂವರು ಎಸ್ಕೇಪ್‌

ಕರ್ನಾಟಕ-ಕೇರಳದ ಗಡಿ ಪ್ರದೇಶವಾದ ವಯನಾಡ್‌ ಜಿಲ್ಲೆಯ ಪೆರಿಯಾ ಪ್ರದೇಶದ ಬಳಿ ಕೇರಳ ಪೊಲೀಸರು ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಇಬ್ಬರು ನಕ್ಸಲರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ ಮೂವರು ನಕ್ಸಲರು ಪರಾರಿಯಾಗಿದ್ದಾರೆ.

2 naxals arrested in kerala s wayanad near karnataka border 3 escaped ash

ವಯನಾಡ್‌ (ನವೆಂಬರ್ 9, 2023): ಮೊಬೈಲ್‌ ಚಾರ್ಜ್‌ ಮಾಡಿಕೊಳ್ಳಲು ನಕ್ಸಲರು ಮನೆಯೊಂದಕ್ಕೆ ಬಂದಾಗ ಪೊಲೀಸರು ದಾಳಿ ನಡೆಸಿದ ಘಟನೆ ಕರ್ನಾಟಕ - ಕೇರಳ ಗಡಿಯ ವಯನಾಡು ಜಿಲ್ಲೆಯಲ್ಲಿ ನಡೆದಿದೆ. ಈ ವೇಳೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ನಕ್ಸಲರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 

ಕರ್ನಾಟಕ-ಕೇರಳದ ಗಡಿ ಪ್ರದೇಶವಾದ ವಯನಾಡ್‌ ಜಿಲ್ಲೆಯ ಪೆರಿಯಾ ಪ್ರದೇಶದ ಬಳಿ ಕೇರಳ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಇಬ್ಬರು ನಕ್ಸಲರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ ಮೂವರು ನಕ್ಸಲರು ಪರಾರಿಯಾಗಿದ್ದಾರೆ.

ಇದನ್ನು ಓದಿ: ಬಾಂಗ್ಲಾದ ಮಾನವ ಸ್ಮಗ್ಲರ್ಸ್‌ ವಿರುದ್ಧ ಎನ್‌ಐಎ ಭರ್ಜರಿ ಬೇಟೆ: ಕರ್ನಾಟಕ ಸೇರಿದಂತೆ ದೇಶದ 8 ರಾಜ್ಯಗಳಲ್ಲಿ ರೇಡ್‌

ಐವರು ನಕ್ಸಲರು ಮನೆಯೊಂದಕ್ಕೆ ಬಂದು ತಮ್ಮ ಮೊಬೈಲ್‌ಗಳನ್ನು ಚಾರ್ಜ್‌ ಮಾಡಿಕೊಳ್ಳುತ್ತಿದ್ದರು. ಇದರ ಸುಳಿವು ವಿಶೇಷ ಕಾರ್ಯಾಚರಣೆ ಪಡೆ (ಎಸ್‌ಒಜಿ) ಪೊಲೀಸರಿಗೆ ಸಿಕ್ಕಿದ್ದು, ನಕ್ಸಲರ ಮೇಲೆ ದಾಳಿ ನಡೆಸಿದ್ದಾರೆ. ಆಗ ಚಕಮಕಿ ನಡೆದಿದೆ. ಬಳಿಕ ಚಂದ್ರು ಹಾಗೂ ಉನ್ನಿಮಾಯಾ ಎಂಬ ಇಬ್ಬರು ನಕ್ಸಲರನ್ನು ಪೊಲೀಸರು ಬಂಧಿಸಿದ್ದಾರೆ ಹಾಗೂ ಹತ್ತಿರದ ಪೊಲೀಸ್‌ ಕ್ಯಾಂಪ್‌ಗೆ ಹೆಚ್ಚಿನ ವಿಚಾರಣೆಗಾಗಿ ಕರೆದೊಯ್ದಿದ್ದಾರೆ. ಈ ವೇಳೆ ಮೂವರು ಪರಾರಿಯಾಗಿದ್ದಾರೆ.

ಕಳೆದ ತಿಂಗಳೂ ಸಹ ನಕ್ಸಲರು ವಯನಾಡ್‌ನ ಮಕ್ಕಿಮಾಳ ಬಳಿಯ ರೆಸಾರ್ಟ್‌ ಒಂದಕ್ಕೆ ನುಗ್ಗಿ ಅಲ್ಲಿನ ಸಿಬ್ಬಂದಿಯ ಮೊಬೈಲ್‌ನಿಂದ ಹಲವು ಪತ್ರಕರ್ತರಿಗೆ ಎಸ್ಟೇಟ್‌ ಕಾರ್ಮಿಕರ ಕಷ್ಟದ ಬಗ್ಗೆ ಸಂದೇಶಗಳನ್ನು ಕಳಿಸಿದ್ದರು. ನಂತರ ಅವರ ಮೇಲೆ ದೇಶದ್ರೋಹ ಪ್ರಕರಣದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂ ಓದಿ: Chhattisgarh: ಭದ್ರತಾ ಸಿಬ್ಬಂದಿಯೊಂದಿಗೆ ನಕ್ಸಲರ ಗುಂಡಿನ ಕಾಳಗ: ಎನ್‌ಕೌಂಟರ್‌ನಲ್ಲಿ ಮಹಿಳಾ ನಕ್ಸಲ್‌ ಬಲಿ

Latest Videos
Follow Us:
Download App:
  • android
  • ios