ಕೇಂದ್ರ ಸರ್ಕಾರಿ ಅಧಿಕಾರಿಯೊಬ್ಬರಿಗೆ ಸೇರಿದ ವಿವಿಧ ರಾಜ್ಯಗಳ 19 ಸ್ಥಳಗಳ ಮೇಲೆ ದಾಳಿ ನಡೆಸಿದ ಕೇಂದ್ರೀಯ ತನಿಖಾ ದಳ (CBI)ದ ಅಧಿಕಾರಿಗಳು 20 ಕೋಟಿ ರು.ಗೂ ಅಧಿಕ ನಗದನ್ನು ವಶಪಡಿಸಿಕೊಂಡಿದ್ದಾರೆ.
ನವದೆಹಲಿ: ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದ ನೀರು ಮತ್ತು ವಿದ್ಯುತ್ ಸಲಹಾ ಸೇವೆ (ವ್ಯಾಪ್‌ಕಾಸ್) ಲಿಮಿಟೆಡ್‌ನ ಮಾಜಿ ಚೇರ್‌ಮನ್ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಜೀಂದರ್ ಕುಮಾರ್ ಗುಪ್ತಾ (Rajendra Kumar Gupta) ಅವರಿಗೆ ಸೇರಿದ ವಿವಿಧ ರಾಜ್ಯಗಳ 19 ಸ್ಥಳಗಳ ಮೇಲೆ ದಾಳಿ ನಡೆಸಿದ ಕೇಂದ್ರೀಯ ತನಿಖಾ ದಳ (CBI)ದ ಅಧಿಕಾರಿಗಳು 20 ಕೋಟಿ ರು.ಗೂ ಅಧಿಕ ನಗದನ್ನು ವಶಪಡಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಗುಪ್ತಾ ಹಾಗೂ ಅವರ ಕುಟುಂಬದ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು. ಇದಾದ ಬಳಿಕ ದಾಳಿ ನಡೆಸಿದ ಅಧಿಕಾರಿಗಳು ನಗದು ಸೇರಿದಂತೆ ಹಲವು ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದಾರೆ. ಇದು ಕೇಂದ್ರ ಜಲಶಕ್ತಿ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಯಾಗಿದೆ.
ಮಮತಾ ಬ್ಯಾನರ್ಜಿಗೆ ಶಾಕ್, ಸಿಬಿಐ ದಾಳಿ ವೇಳೆ ಮೊಬೈಲ್ ಕೆರೆಗೆ ಎಸೆದ ಟಿಎಂಸಿ ಶಾಸಕ ಅರೆಸ್ಟ್!
