ಕನೌಜ್‌[ಜ.11]: ಡಬಲ್‌ ಡೆಕ್ಕರ್‌ ಬಸ್ಸು ಹಾಗೂ ಟ್ರಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಪರಿಣಾಮ ಬಸ್ಸಿಗೆ ಭಾರೀ ಪ್ರಮಾಣದ ಬೆಂಕಿ ಹೊತ್ತಿಕೊಂಡಿರುವ ಘಟನೆ ಉತ್ತರ ಪ್ರದೇಶದ ಕನೌಜ್‌ನಲ್ಲಿ ನಡೆದಿದೆ.

ಶುಕ್ರವಾರ ಸಂಜೆ ನಡೆದ ಈ ಬೆಂಕಿ ದುರಂತದಲ್ಲಿ 50 ಪ್ರಯಾಣಿಕರ ಪೈಕಿ ಸುಮಾರು 20 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಗಂಭೀರ ಸ್ವರೂಪದ ಸುಟ್ಟಗಾಯಗಳಿಗೆ ತುತ್ತಾಗಿದ್ದ 21ಕ್ಕೂ ಹೆಚ್ಚು ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಕನೌಜ್‌ ಎಸ್‌ಪಿ ಹೇಳಿದ್ದಾರೆ.

ಉತ್ತರ ಪ್ರದೇಶದ ಫಾರ್ರುಖಾಬಾದ್‌ನಿಂದ ರಾಜಸ್ಥಾನದ ಜೈಪುರಕ್ಕೆ ಬಸ್‌ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಪ್ರಧಾನಿ ಮೋದಿ ಸಂತಾಪ

ಅಪಘಾತ ಸಂಬಂಧ ಪ್ರಧಾನಿ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದು, ಮೃತತ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಗೃಹ ಸಚಿವ ಅಮಿತ್ ಶಾ ಕೂಡಾ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.