ನವದೆಹಲಿ (ನ.20): ಕೊರೋನಾ ಮೂರನೇ ಅಲೆಯಿಂದ ಉಂಟಾಗಿರುವ ಅಧ್ವಾನಕ್ಕೆ ಬೆಚ್ಚಿ ಬಿದ್ದಿರುವ ರಾಷ್ಟ್ರ ರಾಜಧಾನಿಯಲ್ಲಿ, ಸೋಂಕು ನಿಗ್ರಹಕ್ಕೆ ಅಲ್ಲಿನ ಆಮ್‌ ಆದ್ಮಿ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. 

ಮಾಸ್ಕ್‌ ಧರಿಸದೇ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಿದರೆ ಅವರಿಗೆ 500ರು. ಬದಲಾಗಿ 2000 ರು. ದಂಡ ವಿಧಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ತಿಳಿಸಿದ್ದಾರೆ. 

ಗುರುವಾರ ನಡೆದ ಸರ್ವ ಪಕ್ಷ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆ ಬಳಿಕ ಮಾತನಾಡಿದ ಅರವಿಂದ್‌ ಕೇಜ್ರಿವಾಲ್‌, ಸಾಕಷ್ಟುಮಂದಿ ನಿಯಮ ಪಾಲನೆ ಮಾಡುತ್ತಿದ್ದಾರೆ. ಆದರೆ, ಕೆಲವರು ಮಾಸ್ಕ್‌ ಧರಿಸದೇ ಓಡಾಡುತ್ತಿರುವುದು ಗಮನಕ್ಕೆ ಬಂದಿದೆ. 

ಬೆಂಗಳೂರಿನ ದಾಸಪ್ಪ ಆಸ್ಪತ್ರೆಯಲ್ಲಿ ಲಸಿಕೆ ಸಂಗ್ರಹಕ್ಕೆ ತಯಾರಿ: ಬಿಬಿಎಂಪಿ ಆಯುಕ್ತ ...

ಸರಿಯಾಗಿ ನಿಯಮ ಪಾಲನೆ ಮಾಡುತ್ತಿಲ್ಲ. ಆ ಕಾರಣದಿಂದ 2000 ಸಾವಿರ ರು. ದಂಡ ವಿಧಿಸುವ ನಿರ್ಧಾರಕ್ಕೆ ಬರಲಾಗಿದೆ. ಅಲ್ಲದೆ, ಹಬ್ಬಗಳ ಆಚರಣೆಗೂ ಕಡಿವಾಣ ಹಾಕಲಾಗಿದೆ ಎಂದು ತಿಳಿಸಿದರು.