2008ರ ಅಹಮದಾಬಾದ್ ಸರಣಿ ಸ್ಪೋಟ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಈ ಮಹತ್ವದ ತೀರ್ಪಿನಲ್ಲಿ, 38 ಅಪರಾಧಿಗಳಿಗೆ ಮರಣದಂಡನೆ ಮತ್ತು 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ಖಾಯಂಗೊಳಿಸಿದ್ದು, ಸಂತ್ರಸ್ತರಿಗೆ ಪರಿಹಾರವನ್ನು ಘೋಷಿಸಿದೆ.

2008 Ahmedabad Serial Blast Case

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನವದೆಹಲಿ: 2008ರ ಅಹಮದಾಬಾದ್ ಸರಣಿ ಸ್ಪೋಟದ ವಿಶೇಷ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಪ್ರಕರಣದ 38 ಅಪರಾಧಿಗಳಿಗೆ ಮರಣದಂಡನೆ ಖಾಯಂ ಆಗಿದೆ. ಹಾಗೆಯೇ 11 ಅಪರಾಧಿಗಳ ಜೀವಾವಧಿ ಶಿಕ್ಷೆ ಮತ್ತು ಈ ಸರಣಿ ಸ್ಪೋಟದಲ್ಲಿ ಮೃತ ಕುಟುಂಬಗಳಿಗೆ ₹10 ಲಕ್ಷ ಮತ್ತು ಗಾಯಗೊಂಡವರಿಗೆ ₹5 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಮಹತ್ವದ ತೀರ್ಪನ್ನು ನೀಡಿದೆ. ಪ್ರಕರಣದ ಎಲ್ಲಾ 49 ಅಪರಾಧಿಗಳು ವಿಶೇಷ ನ್ಯಾಯಾಲಯ ನೀಡಿದ ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ.

21 ಸ್ಥಳಗಳಲ್ಲಿ ಸರಣಿ ಬಾಂಬ್ ಸ್ಪೋಟ

ಫೆಬ್ರವರಿ 2022ರಲ್ಲಿ ವಿಶೇಷ ನ್ಯಾಯಾಲಯ ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣದ ವಿಚಾರಣೆ ನಡೆಸಿ ಮಹತ್ವದ ತೀರ್ಪು ನೀಡಿತ್ತು. 49 ಜನರಲ್ಲಿ 38 ಜನರಿಗೆ ಮರಣದಂಡನೆ ವಿಧಿಸಲಾಗಿತ್ತು. ಜುಲೈ 26, 2008 ರಂದು ಅಹಮದಾಬಾದ್‌ ನಗರದ 21 ಸ್ಥಳಗಳಲ್ಲಿ ಸರಣಿ ಬಾಂಬ್ ಸ್ಪೋಟವಾಗಿತ್ತು. ಈ ಸ್ಫೋಟದಲ್ಲಿ ಒಟ್ಟು 56 ಜನರು ಸಾವನ್ನಪ್ಪಿದ್ರೆ 250ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಈ ಸ್ಫೋಟದ ಹೊಣೆಯನ್ನು ಇಂಡಿಯನ್ ಮುಜಾಹಿದ್ದೀನ್ (IM) ಹೊತ್ತುಕೊಂಡಿತ್ತು. ಜುಲೈ 26, 2008 ರಂದು ಸಂಜೆ 6:30 ರಿಂದ ರಾತ್ರಿ 8:15 ರ ನಡುವೆ ಅಹಮದಾಬಾದ್‌ನ 20 ಸ್ಥಳಗಳಲ್ಲಿ ಬಾಂಬ್ ಸ್ಫೋಟಗಳು ಸಂಭವಿಸಿದವು.

ಅಹಮದಾಬಾದ್‌ನ 21 ಸ್ಥಳಗಳಲ್ಲಿ ಬಾಂಬ್ ಸ್ಫೋಟ

ಹಟ್ಕೇಶ್ವರ, ನರೋಲ್ ಸರ್ಕಲ್, ಖಾಡಿಯಾ, ನರೋಡಾ, ಜವಾಹರ್ ಚೌಕ್, ಗೋವಿಂದ್ ವಾಲಿ, ಬಾಪಾ ನಗರ, ಇಸಾನ್‌ಪುರ, ಸಿವಿಲ್ ಆಸ್ಪತ್ರೆ, ಥಕ್ಕರ್, ಎಲ್‌ಜಿ ಆಸ್ಪತ್ರೆ, ರಾಯ್‌ಪುರ ಚಕ್ಲಾ, ಸಾರಂಗಪುರ ಮತ್ತು ಸರ್ಖೇಜ್ ಸೇರಿದಂತೆ 21 ಸ್ಥಳಗಳಲ್ಲಿ ಸ್ಫೋಟ ಸಂಭವಿಸಿತ್ತು.

ಈ ಸಂಬಂಧ ತನಿಖೆ ನ್ಯಾಯಾಲಯಕ್ಕೆ 4 ಸಾವಿರ ಪುಟಗಳ ದಾಖಲೆ, 1,100 ಕ್ಕೂ ಹೆಚ್ಚು ಸಾಕ್ಷಿಗಳು ನ್ಯಾಯಾಲಯದ ಮುಂದೆ ಸಾಕ್ಷ್ಯ ನುಡಿದಿದ್ದಾರೆ. ಈ ಪ್ರಕರಣದ ವಿಚಾರಣೆ ಸಮಯದಲ್ಲಿ ನ್ಯಾಯಧೀಶರು ಏಳು ಬಾರಿ ಬದಲಾಗಿದ್ದರು. ಅಂತಿಮವಾಗಿ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ 8ನೇ ಫೆಬ್ರವರಿ 2022ರಲ್ಲಿ ತೀರ್ಪು ಪ್ರಕಟಿಸಿತ್ತು. ಈ ಪ್ರಕರಣದಲ್ಲಿ 49 ಜನರನ್ನು ದೋಷಿಗಳಾದ್ರೆ, 28 ಆರೋಪಿಗಳನ್ನು ಖುಲಾಸೆಗೊಳಿಸಲಾಗಿತ್ತು.