ಔರೆಯಾ(ಮೇ.16): ಲಾಕ್‌ಡೌನ್ ನಡುವೆ ತಮ್ಮ ಊರಿಗೆ ಮರಳುತ್ತಿದ್ದ ಕೆಲ ಕಾರ್ಮಿಕರು ರಸ್ತೆ ಅಪಘಾತದಲ್ಲಿ ಬಲಿಯಾಗಿದ್ದಾರೆ. ಟ್ರಕ್‌ಗಳ ನಡುವೆ ಸಂಭವಿಸಿದ ಈ ಅಪಘಾತದಲ್ಲಿ ಬರೋಬ್ಬರಿ 24 ಮಂದಿ ಕಾರ್ಮಿಕರು ಮೃತಪಟ್ಟಿದ್ದು, 36 ಮಂದಿ ಗಾಯಗೊಂಡಿದ್ದಾರೆ.

"

ಹೌದು ರಾಜಸ್ಥಾನದಿಂದ ಹೊರಟಿದ್ದ ಟ್ರಕ್‌ ಒಂದು ಉತ್ತರ ಪ್ರದೇಶದ ಔರೆಯಾದಲ್ಲಿ ಮತ್ತೊಂದು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಟ್ರಕ್‌ನಲ್ಲಿದ್ದ ಕಾರ್ಮಿಕರು ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಘಟನೆ ಬೆನ್ನಲ್ಲೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಮಾಹಿತಿ ಸಿಕ್ಕ ಬೆನ್ನಲ್ಲೇ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯ ಆರಂಭಿಸಿದ್ದಾರೆ.

ಘಟನೆ ಬಳಿಕ ಫೋಟೋ ಒಂದು ವೈರಲ್ ಆಗಿದ್ದು, ಅಪಘಾತ ನಡೆದ ಸ್ಥಳದಲ್ಲಿ ವಸ್ತುಗಳು ಅಸ್ತವ್ಯಸ್ತವಾಗಿ ಬಿದ್ದಿರುವ ದೃಶ್ಯಗಳಿವೆ. ಈ ಅಪಘಾತ ಮುಂಜಾನೆ ಸುಮಾರು  3 ರಿಂದ 4 ಗಂಟಡಯೊಳಗೆ ನಡೆದಿದೆ ಎಂದು ಅಂದಾಜಿಸಲಾಗಿದೆ. ಅಲ್ಪ ಸ್ವಲ್ಪ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಪರಿಸ್ಥಿತಿ ಇರುವವರನ್ನು ಬೇರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇನ್ನು ಟ್ರಕ್‌ನಲಲಿ ಪ್ರಯಾಣಿಸುತ್ತಿದ್ದ ಕಾರ್ಮಿಕರಲ್ಲಿ ಹೆಚ್ಚಿನವರು ಬಿಹಾರ, ಝಾರ್ಖಂಡ್ ಹಾಗೂ ಪಶ್ಚಿಮ ಬಂಗಾಳದವರಾಗಿದ್ದಾರೆ ಎಂದು ಔರೆಯಾದ ಡಿಎಂ ಅಭಿಷೇಕ್ ಸಿಂಗ್ ತಿಳಿಸಿದ್ದಾರೆ.