ನಿನ್ನೆ 24,882 ಕೇಸ್‌: ಈ ವರ್ಷದ ಗರಿಷ್ಠ| ಸಕ್ರಿಯ ಸೋಂಕಿತರ ಸಂಖ್ಯೆ 2 ಲಕ್ಷಕ್ಕೇರಿಕೆ

ನವದೆಹಲಿ(ಮಾ.14): ದೇಶದಲ್ಲಿ ಹೊಸ ಕೊರೋನಾ ಪ್ರಕರಣಗಳ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಿದ್ದು, ಶನಿವಾರ ಬೆಳಗ್ಗೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ 24,882 ಹೊಸ ಪ್ರಕರಣಗಳು ದಾಖಲಾಗಿವೆ. ಇದು ಕಳೆದ 83 ದಿನಗಳಲ್ಲೇ (ಈ ವರ್ಷದಲ್ಲೇ) ಗರಿಷ್ಠ ಪ್ರಮಾಣವಾಗಿದೆ.

ಇದೇ ವೇಳೆ, ಸಕ್ರಿಯ ಸೋಂಕಿತರ ಪ್ರಮಾಣ 2.02 ಲಕ್ಷಕ್ಕೆ ಹೆಚ್ಚಳವಾಗಿದೆ.

ಕಳೆದ ವರ್ಷ ಡಿಸೆಂಬರ್‌ 20ರಂದು ದೇಶದಲ್ಲಿ 26,624 ಪ್ರಕರಣಗಳು ಪತ್ತೆಯಾಗಿದ್ದವು. ಇದೇ ವೇಳೆ ಶನಿವಾರ 140 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 1,58,446ಕ್ಕೆ ಏರಿಕೆಯಾಗಿದೆ. ಜೊತೆಗೆ ಒಟ್ಟು ಸೋಂಕಿತರ ಸಂಖ್ಯೆ 1.13 ಕೋಟಿಗೆ ತಲುಪಿದ್ದು, ಈ ಪೈಕಿ 1.09 ಕೋಟಿ ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.