Asianet Suvarna News Asianet Suvarna News

ಕಂದಕಕ್ಕೆ ಉರುಳಿದ ಮದ್ವೆ ದಿಬ್ಬಣದ ಬಸ್: 25 ಜನರ ದಾರುಣ ಸಾವು

ಮದ್ವೆ ದಿಬ್ಬಣದ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ 25 ಜನ ದಾರುಣವಾಗಿ ಸಾವನ್ನಪ್ಪಿದ ಘಟನೆ ಉತ್ತರಾಖಂಡ್‌ನ ಪೌರಿ ಗರ್ವಾಲ್‌ನಲ್ಲಿ ನಡೆದಿದೆ.

25 killed after Wedding Party bus fell into a gorge in Uttarakhands Pauri Garhwal akb
Author
First Published Oct 5, 2022, 9:46 AM IST

ಡೆಹ್ರಾಡೂನ್‌: ಮದ್ವೆ ದಿಬ್ಬಣದ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ 25 ಜನ ದಾರುಣವಾಗಿ ಸಾವನ್ನಪ್ಪಿದ ಘಟನೆ ಉತ್ತರಾಖಂಡ್‌ನ ಪೌರಿ ಗರ್ವಾಲ್‌ನಲ್ಲಿ ನಡೆದಿದೆ. ಬಸ್‌ನಲ್ಲಿ ಒಟ್ಟು 40ಕ್ಕಿಂತ ಹೆಚ್ಚು ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಇವರಲ್ಲಿ 21 ಪ್ರಯಾಣಿಕರನ್ನು ವಿಪತ್ತು ನಿರ್ವಹಣಾ ತಂಡ ಹಾಗೂ ಪೊಲೀಸರು ರಕ್ಷಣೆ ಮಾಡಿದ್ದಾರೆ. ಸಿಮ್ದಿ ಗ್ರಾಮದ ಸಮೀಪ ಈ ಅವಘಡ ಸಂಭವಿಸಿದೆ.

'ಧುಮಕೋಟ್ ಸಮೀಪದ ಬಿರೊಖಾಲ್ (Birokhal) ಪ್ರದೇಶದಲ್ಲಿ ಮಧ್ಯರಾತ್ರಿ ಈ ಅವಘಡ ಸಂಭವಿಸಿದೆ. ಈ ದುರಂತದಲ್ಲಿ 25 ಜನ ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಹಾಗೂ ರಾಜ್ಯ ವಿಪತ್ತು ನಿರ್ವಹಣಾ ತಂಡ 21 ಜನರನ್ನು ರಕ್ಷಿಸಿದ್ದಾರೆ ಎಂದು ರಾಜ್ಯ ಪೊಲೀಸ್ ಮುಖ್ಯಸ್ಥ ಅಶೋಕ್ ಕುಮಾರ್ (Ashok Kumar) ಹೇಳಿದ್ದಾರೆ.  ಈ ಅವಘಡದ ಹಾಗೂ ನಂತರದ ರಕ್ಷಣಾ ಕಾರ್ಯಾಚರಣೆಯ ದೃಶ್ಯಾವಳಿಗಳನ್ನು ರಾಜ್ಯ ಪೊಲೀಸ್ ಮುಖ್ಯಸ್ಥ ಟ್ವಿಟ್ಟರ್‌ನಲ್ಲಿ ಶೇರ್ ಮಾಡಿದ್ದಾರೆ. ಇದರಲ್ಲಿ ರಕ್ಷಣಾ ತಂಡ ಗಾಯಾಳುಗಳನ್ನು ರಕ್ಷಣೆ ಮಾಡುತ್ತಿರುವ ದೃಶ್ಯವಿದೆ. ಈ ಭೀಕರ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ. 

ಕಂದಕಕ್ಕೆ ಉರುಳಿದ ಬಸ್: 11 ಜನರ ದಾರುಣ ಸಾವು: ಸೇನೆಯಿಂದ ರಕ್ಷಣಾ ಕಾರ್ಯ

ಘಟನೆಯನ್ನು ಹೃದಯ ವಿದ್ರಾವಕ ಎಂದು ಹೇಳಿದ ಪ್ರಧಾನಿ ಮೃತರ ಕುಟುಂಬದವರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಉತ್ತರಾಖಂಡ್‌ನ (Uttarakhand) ಪೌರಿಯಲ್ಲಿ ಸಂಭವಿಸಿದ ಬಸ್ ಅಪಘಾತ ಹೃದಯ ವಿದ್ರಾವಕವಾಗಿದೆ. ಈ ದುರಂತ ಘಳಿಗೆಯಲ್ಲಿ ನನ್ನ ಸಂತಾಪ ದುಃಖತಪ್ತ ಕುಟುಂಬಗಳೊಂದಿಗೆ ಇದೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಿ ಎಂದು ಪ್ರಾರ್ಥಿಸುತ್ತೇನೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಅವರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುವುದು ಎಂದು ಪ್ರಧಾನಿ ಮೋದಿ(Narendra Modi) ಹೇಳಿಕೆಯನ್ನು ಪಿಎಂಒ ಟ್ವೀಟ್ ಮಾಡಿದೆ.

ರಸ್ತೆ ಮಧ್ಯೆ ಕಂದಕಕ್ಕೆ ಬಿದ್ದ ಬೈಕ್; ಸವಾರರಿಬ್ಬರ ದಾರುಣ ಸಾವು!

ಹಾಗೆಯೇ ಉತ್ತರಾಖಂಡ್ ಸಿಎಂ ಪುಷ್ಕರ್ ಸಿಂಗ್ (Pushkar Singh Dhami) ಕೂಡ ದುರಂತದಲ್ಲಿ ಮೃತಪಟ್ಟವರಿಗೆ ಶೋಕ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬದೊಂದಿಗೆ ರಾಜ್ಯ ಸರ್ಕಾರವಿದೆ ಎಂದು ಅವರು ಹೇಳಿದ್ದಾರೆ. ಈ ಮದುವೆ ದಿಬ್ಬಣದ ಬಸ್‌ ಲಾಲ್‌ದಂಗ್‌ (Laldhang) ಪ್ರದೇಶದಿಂದ ಹೊರಟಿತ್ತು. ಆದರೆ ದಾರಿಮಧ್ಯೆ ಅಪಘಾತ ಸಂಭವಿಸಿದೆ ಎಂದು ಹರಿದ್ವಾರದ ಪೊಲೀಸ್ ಮುಖ್ಯಸ್ಥ (Haridwar police chief) ಸ್ವತಂತ್ರ ಕುಮಾರ್ ಹೇಳಿದ್ದರು.
 

Follow Us:
Download App:
  • android
  • ios