ಜೈಪುರ[ಫೆ.26]: ಬಸ್ ಒಂದು ನದಿಗೆ ಉರುಳಿದ ಪರಿಣಾಮ 25 ಮಂದಿ ಜಲ ಸಮಾಧಿಯಾಗಿರುವ ಘಟನೆ ರಾಜಸ್ಥಾನದ ಬೂಂಧಿ ಜಿಲ್ಲೆಯಲ್ಲಿ ನಡೆದಿದೆ.

"

ಬುಧವಾರ ಬೆಳಗ್ಗೆ ಈ ಘಟನೆ ನಡೆದಿದೆ. ಪ್ರಯಾಣಿಕರಿಂದ ತುಂಬಿದ್ದ ಬಸ್ ನಿಯಂತ್ರಣ ಕಳೆದುಕೊಂಡು ಏಕಾಏಕಿ ನದಿಗುರುಳಿದ್ದು, 25 ಮಂದಿ ಮೃತಪಟ್ಟಿದ್ದಾರೆ. ಈ ದುರಂತದಲ್ಲಿ ಹಲವರಿಗೆ ಗಾಯಗಳಾಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈ ಸಂಬಂಧ ಟ್ವೀಟ್ ಮಾಡಿದ್ದು, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಗಾಯಾಳುಗಳು ಶೀಗ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಮಂಡ್ಯದಲ್ಲೂ ನಡೆದಿತ್ತು ಇಂತಹುದೇ ದುರಂತ!

2018ರ ನವೆಂಬರ್ 24ರಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದ ವಿಸಿ ನಾಲೆ ಬಳಿ ಇಂತಹುದೇ ಬಸ್ ದುರಂತ ನಡೆದಿತ್ತು. ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಒಂದು ನಾಲೆಗೆ ಉರುಳಿದ್ದು, ಐವರು ಮಕ್ಕಳು ಸೇರಿದಂತೆ ಒಟ್ಟು 30 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದರು. 

News In 100 Seconds: ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್

"