ಶ್ರೀನಗರ(ಅ. 29)  ಉಗ್ರರು ಮತ್ತೆ ಜಮ್ಮು ಕಾಶ್ಮೀರದಲ್ಲಿ ಅಟ್ಟಹಾಸ ಮೆರೆದಿದ್ದಾರೆ  ಕುಲ್ಗಾಂ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಫಿದಾ ಹುಸೇನ್, ಉಮರ್ ರಶೀದ್ ಮತ್ತು ಉಮರ್ ರಂಜಾನ್ ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಕುಲ್ಗಾಂ ಜಿಲ್ಲೆಯ ಖಾಜಿಗುಂಡ್‌ನ ವೈ ಕೆ ಪೊರಾ ಪ್ರದೇಶದಲ್ಲಿ ಗುರುವಾರ ಸಂಜೆ ನಡೆದ ಗುಂಡಿನ ದಾಳಿಯಲ್ಲಿ  ಮೂವರು ಬಿಜೆಪಿ ನಾಯಕರ ಹತ್ಯೆಯಾಗಿದೆ.  ವೈ ಕೆ ಪೊರಾದಲ್ಲಿ ಮೂವರು ವ್ಯಕ್ತಿಗಳ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ, ಅವರಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇತರ ಇಬ್ಬರನ್ನು ಖಾಜಿಗುಂಡ್‌ನ ತುರ್ತು ಆಸ್ಪತ್ರೆಗೆ ದಾಖಲಿಸುವ ಯತ್ನ ಮಾಡಿದರೂ ಫಲಕಾರಿಯಾಗಲಿಲ್ಲ.

ಪುಲ್ವಾಮಾ ದಾಳಿ ನಾವೇ ಮಾಡಿದ್ದು ಎಂದು ಒಪ್ಪಿಕೊಂಡ ಕುತಂತ್ರಿ

ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದಿದ್ದು ಉಗ್ರರ ಹುಡುಕಾಟ ನಡೆಸಿವೆ.  ದಾಳಿಯನ್ನು ಬಿಜೆಪಿ ಖಂಡಿಸಿದ್ದು ಕೂಡಲೇ ಉಗ್ರರ ಬಂಧನವಾಗಬೇಕು ಎಂದು ಬಿಜೆಪಿ ಆಗ್ರಹಿಸಿದೆ. 

ಜುಲೈನಲ್ಲಿ, ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾಗ  ಬಿಜೆಪಿ ಮುಖಂಡ ಶೇಖ್ ವಸೀಮ್ ಬ್ಯಾರಿ ಮತ್ತು ಅವರ ಇಬ್ಬರು ಬೆಂಬಲಿಗರನ್ನು ಹತ್ಯೆ ಮಾಡಿದ್ದರು.