ನವದೆಹಲಿ(ಅ.22): ಕೊರೋನಾ ಪ್ರಕರಣಗಳ ಇಳಿಕೆಯ ಹಾದಿ ಮುಂದುವರಿದಿದ್ದು, ಸತತ ಮೂರು ದಿನಗಳಿಂದ 60 ಸಾವಿರಕ್ಕಿಂತಲೂ ಕಡಿಮೆ ಕೊರೋನಾ ಪ್ರಕರಣಗಳು ದಾಖಲಾಗಿವೆ.

ಬುಧವಾರ 54,376 ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 76.99 ಲಕ್ಷಕ್ಕೆ ತಲುಪಿದೆ. ಇದೇ ವೇಳೆ ಕೊರೋನಾಕ್ಕೆ 704 ಮಂದಿ ಬಲಿ ಆಗಿದ್ದು, ಮೃತರ ಸಂಖ್ಯೆ 1,16,537ಕ್ಕೆ ಏರಿಕೆ ಆಗಿದೆ.

ಇನ್ನು ಗಮನಾರ್ಹ ಸಂಗತಿಯೆಂದರೆ ಒಂದೇ ದಿನ 79,651 ಮಂದಿ ಕೊರೋನಾದಿಂದ ಚೇತರಿಸಿಕೊಂಡಿದ್ದು, ಗುಣಮುಖರಾದವರ ಸಂಖ್ಯೆ 68.66 ಲಕ್ಷಕ್ಕೆ ಏರಿಕೆ ಆಗಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 7.15 ಲಕ್ಷಕ್ಕೆ ಇಳಿಕೆ ಆಗಿದೆ