ಚೆನ್ನೈ, (ಜ.10): ಜಲ್ಲಿಕಟ್ಟು ನೋಡುವ ವೇಳೆ ಮನೆ ಗೋಡೆ ಕುಸಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಹೊಸೂರು ಸಮೀಪದ ಮೇಪನಪಲ್ಲಿ ಬಳಿ ನಡೆದಿದೆ.

ಘಟನೆಯಲ್ಲಿ 2 ವರ್ಷದ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಸಮೀಪದ ಕೃಷ್ಣಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಸುಗ್ಗಿ ಸಂಕ್ರಾಂತಿ; ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸಂಭ್ರಮವೋ ಸಂಭ್ರಮ!

ಸಂಕ್ರಾಂತಿ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಈ ಜಲ್ಲಿಕಟ್ಟು ಸ್ಪರ್ಧೆ ನೋಡಲು ಜನ ಸಮೂಹ ಸೇರಿತ್ತು. ಕೆಲವರು ಮನೆಯ ಟೆರೇಸ್ ಮೇಲೆ ನಿಂತು ವೀಕ್ಷಣೆ ಮಾಡುತ್ತಿದ್ರು.  

ಮನೆ ಮೇಲೆ ಭಾರಿ ಜನಸಮೂಹ ಸೇರುತ್ತಿದ್ದಂತೆ ಇದ್ದಕ್ಕಿದ್ದಂತೆ ಗೋಡೆ ಕುಸಿದಿದೆ. ಇನ್ನು ಘಟನಾ ಸ್ಥಳಕ್ಕೆ ಕೃಷ್ಣಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.