ಹೈದರಾಬಾದ್‌[ಡಿ.16]: ಅತ್ಯಾಚಾರ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣದ ದೋಷಿಗಳಿಗೆ 21 ದಿನದಲ್ಲಿ ಗಲ್ಲು ಶಿಕ್ಷೆ ವಿಧಿಸುವ ಕಠಿಣ ಕಾನೂನು ಜಾರಿಗೊಳಿಸಿರುವ ಹೊರತಾಗಿಯೂ ಆಂಧ್ರ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣಗಳು ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಕಾಯ್ದೆ ಜಾರಿ ಬಳಿಕವೂ ರಾಜ್ಯದ ವಿವಿಧ ಭಾಗಗಳಲ್ಲಿ ಮೂರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ ಎಸಗಿದ ಘಟನೆಗಳು ನಡೆದಿವೆ.

ಅಮರಾವತಿ ಸಮೀಪದ ಗುಂಟೂರು ಪಟ್ಟಣದಲ್ಲಿ ಮೊದಲ ಘಟನೆ ಬೆಳಕಿಗೆ ಬಂದಿದ್ದು, ಐದು ವರ್ಷದ ಬಾಲಕಿಯ ಮೇಲೆ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 19 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ. ನಿರ್ಜನ ಪ್ರದೇಶಕ್ಕೆ ಬಾಲಕಿಯನ್ನು ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದೆ. ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ ಲಕ್ಷ್ಮಣ್‌ ರೆಡ್ಡಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಕೃಷ್ಣಾ ಜಿಲ್ಲೆಯಲ್ಲಿ ಮೂರನೇ ಪ್ರಕರಣದಲ್ಲಿ ಮೂಗ ಮತ್ತು ಕಿವುಡ ಬಾಲಕಿಯ ಮೇಲೆ ಪ್ರಕಾಶಂ ಜಿಲ್ಲೆಯಲ್ಲಿ ಅತ್ಯಾಚಾರ ಎಸಗಲಾಗಿದೆ. ಮಹಿಳೆಯೊಬ್ಬಳು ತನ್ನ 14 ವರ್ಷದ ಮಗಳನ್ನು ತನ್ನ ಪ್ರಿಯತಮನಿಗೆ ಒಪ್ಪಿಸಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಮತ್ತು ಆಕೆಯ ಪ್ರಿಯತಮನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.