ಬಿಹಾರ ಚುನಾವಣೆ ಸದ್ಯ ಇಡೀ ದೇಶದ ಗಮನ ಸೆಳೆದಿದೆ. ಹೀಗಿರುವಾಗ ಈ ಚುನಾವಣೆಗೆ ಸಂಬಂಧಿಸಿದಂತೆ ಆತಂಕಕಾರಿ ವಿಚಾರವೊಂದು ಬಹಿರಂಗಗೊಂಡಿದೆ. ಹೌದು ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್‌ ನಡೆಸಿದ ಅನಾಲಿಸಿಸ್ ಅನ್ವಯ ಈ ಚುನಾವಣೆಯ ಮೊದಲ ಹಂತದಲ್ಲಿ ಸ್ಪರ್ಧಿಸುತ್ತಿರುವ ಒಟ್ಟು 1,064 ಅಭ್ಯರ್ಥಿಗಳ ಪೈಕಿ 328(31%) ಮಂದಿ ವಿರುದ್ಧ ಕ್ರಿಮಿನಲ್ ಕೇಸ್‌ಗಳು ದಾಖಲಾಗಿವೆ. 

ಇನ್ನು ಈ ದಾಖಲೆಯನ್ವಯ ಕ್ರಿಮಿನಲ್ ಕೇಸ್ ದಾಖಲಾದವರಲ್ಲಿ 244( 23%) ಮಂದಿ ಅಭ್ಯರ್ಥಿಗಳ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣಗಣಗಳಿವಬೆ. ಇನ್ನು ಇವರಲ್ಲಿ ಮೂವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದರೆ, 26 ಮಂದಿ ವಿರುದ್ಧ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ ಪ್ರಕರಣಗಳು ದಾಖಲಾಗಿವೆ. ಅಲ್ಲದೇ 83 ಮಂದಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.

ಯಾವ ಪಕ್ಷದ ಅಭ್ಯರ್ಥಿಗಳ ವಿರುದ್ಧ ಪ್ರಕರಣ?