ಬಿಹಾರದಲ್ಲಿ ದಲಿತರ 35 ಮನೆಗಳಿಗೆ ಬೆಂಕಿ; ಇತ್ತ ರಾಜಕೀಯ ನಾಯಕರ ಕೆಸರೆರಾಚಟ
ಬಿಹಾರದ ನವಾಡ ಜಿಲ್ಲೆಯಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ದಲಿತರ 35 ಮನೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಈ ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲವಾದರೂ, 15 ಮಂದಿಯನ್ನು ಬಂಧಿಸಲಾಗಿದೆ ಮತ್ತು ಎಸ್‌ಐಟಿ ತನಿಖೆಗೆ ಆದೇಶಿಸಲಾಗಿದೆ.
ಪಾಟನಾ: ಬಿಹಾರದ ನವಾಡ ಜಿಲ್ಲೆಯಲ್ಲಿ ದಲಿತರ 35 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಬುಧವಾರ ಸಂಜೆ ಮಾಂಝಿ ತೋಲಾ ಎಂಬಲ್ಲಿ ಘಟನೆ ನಡೆದಿದ್ದು, ಜಮೀನು ವಿವಾದವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಸಂಬಂಧ 15 ಜನರನ್ನು ಬಂಧಿಸಲಾಗಿದೆ.
ದಲಿತರ ಮನೆಗೆ ಬೆಂಕಿ ಹಚ್ಚಿದ ಪ್ರಕರಣ ಬಿಹಾರದಲ್ಲಿ ರಾಜಕೀಯ ವಿವಾದ ಸೃಷ್ಟಿಸಿದೆ. ಖುದ್ದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಎಡಿಜಿಪಿ) ಸ್ಥಳಕ್ಕೆ ಹೋಗಿ ತನಿಖೆಯ ಉಸ್ತುವಾರಿ ವಹಿಸಬೇಕು ಹಾಗೂ ಶಾಂತಿ ಕಾಪಾಡಬೇಕು. ಕೃತ್ಯದ ಎಸ್‌ಐಟಿ ತನಿಖೆಗೆ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ.
ಆದರೆ ಆರ್‌ಜೆಡಿ ನೇತಾರ ಲಾಲು ಯಾದವ್ ಹಾಗೂ ಕಾಂಗ್ರೆಸ್ ನಾಯಕರು, ‘ಬಿಹಾರ ಜಂಗಲ್ ರಾಜ್ಯವಾಗಿ ಮಾರ್ಪಾಡಾಗಿದೆ. ನಿತೀಶ್ ಕುಮಾರ್ ಅವರು ಆಡಳಿತದಲ್ಲಿ ವಿಫಲರಾಗಿದ್ದಾರೆ’ ಎಂದು ಕಿಡಿಕಾರಿದ್ದಾರೆ. ಆದರೆ ಕೇಂದ್ರ ಮಂತ್ರಿ ಜೀತನ್ ರಾಂ ಮಾಂಝಿ ಇದಕ್ಕೆ ತಿರುಗೇಟು ನೀಡಿದ್ದು, ಬಂಧಿತರಲ್ಲಿ ಶೇ.90 ಜನರು ಆರ್‌ಜೆಡಿಯವರು ಎಂದಿದ್ದಾರೆ.
Dalit Family Assaulted: ಕೇರಿಯಲ್ಲಿ ಪಾನಿಪುರಿ ತಿಂದರೆಂದು ದಲಿತರ ಮನೆಗೆ ನುಗ್ಗಿ ಹಲ್ಲೆ!
ಆಗಿದ್ದೇನು?:
ಬುಧವಾರ ಸಂಜೆ 7.30ರ ಸುಮಾರಿಗೆ ಮಾಂಝಿ ಟೋಲಾಗೆ ಬಂದ ಉದ್ರಿಕ್ತರ ಗುಂಪು ದಲಿತರ ಅರೆ-ಪಕ್ಕ ಮನೆಗಳಿಗೆ ಬೆಂಕಿ ಹಚ್ಚಿದೆ. ಮನೆಗಳಿಗೆ ಬೆಂಕಿ ಹಚ್ಚುವಾಗ ಗಾಳಿಯಲ್ಲಿ ಗುಂಡನ್ನೂ ಹಾರಿಸಿದೆ. ಆದರೆ ಸುದೈವವಶಾತ್ ಯಾರೂ ಗಾಯಗೊಂಡಿಲ್ಲ. ಘಟನೆಗೆ ಜಮೀನು ವಿವಾದವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ. ಮತ್ತೆ ಪರಿಸ್ಥಿತಿ ಭುಗಿಲೆದ್ದಂತೆ ತಡೆಯಲು ಹೆಚ್ಚಿನ ಪೊಲೀಸ್ ತುಕಡಿಯನ್ನು ಪ್ರದೇಶದಲ್ಲಿ ನಿಯೋಜಿಸಲಾಗಿದೆ. ಸಂತ್ರಸ್ತರಿಗೆ ತಾತ್ಕಾಲಿಕ ಟೆಂಟ್‌ಗಳನ್ನು ಸ್ಥಾಪಿಸಲಾಗಿದೆ.
ವಿಜಯಪುರ: ದಲಿತರ ಮನೆಗಳಿಗೆ ಮಂತ್ರಾಕ್ಷತೆ ವಿತರಿಸಿದ ಪೇಜಾವರ ಶ್ರೀಗಳು