ಪ್ರಧಾನಿ ನರೇಂದ್ರ ಮೋದಿ ಮೂರನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ ಭರದಿಂದ ಸಾಗಿದ್ದು, ಗಣ್ಯಾತಿಗಣ್ಯರು ತಮ್ಮ ತಮ್ಮ ಲೋಕಸಭಾ ಕ್ಷೇತ್ರಗಳಲ್ಲಿ ಮತ ಚಲಾಯಿಸುತ್ತಿದ್ದಾರೆ.

ಅಹ್ಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ಮೂರನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ ಭರದಿಂದ ಸಾಗಿದ್ದು, ಗಣ್ಯಾತಿಗಣ್ಯರು ತಮ್ಮ ತಮ್ಮ ಲೋಕಸಭಾ ಕ್ಷೇತ್ರಗಳಲ್ಲಿ ಮತ ಚಲಾಯಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಅಹ್ಮದಾಬಾದ್‌ನ ನಿಶಾನ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮತ ಚಲಾಯಿಸಿದರು. ಇದಕ್ಕೂ ಮೊದಲು ಪ್ರಧಾನಿ ಕಾಲ್ನಡಿಗೆಯ ಮೂಲಕ ಜನರತ್ತ ಕೈಬೀಸಿಕೊಂಡು ಮತಗಟ್ಟೆ ಕೇಂದ್ರಕ್ಕೆ ಆಗಮಿಸಿದ್ದರು. ಕಳೆದ ಗುಜರಾತ್ ವಿಧಾನಸಭೆ ಮತ್ತು ಕಳೆದ ಲೋಕಸಭೆ ಮತದಾನಕ್ಕೂ ಹೀಗೆ ಪ್ರಧಾನಿ ಮೋದಿ ಆಗಮಿಸಿದ್ದರು, ಅಮಿತ್ ಷಾ ಕೂಡ ಪ್ರಧಾನಿ ಜೊತೆಗಿದ್ದರು. ಇತ್ತ ಪ್ರಧಾನಿ ನರೇಂದ್ರ ಮೋದಿಯನ್ನು ನೋಡುವುದಕ್ಕಾಗಿ ರಸ್ತೆಯುದ್ಧಕ್ಕೂ ಜನ ನಿಂತಿದ್ದರು.

Scroll to load tweet…

ಮತದಾನ ಚಲಾಯಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಪ್ರಧಾನಿ ಮೋದಿ ಇಂದು ದೇಶಾದ್ಯಂತ ಮೂರನೇ ಹಂತದ ಮತದಾನ ನಡೆಯುತ್ತಿದೆ. ದೇಶದ ಜನ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸುವಂತೆ ಅವರು ಮನವಿ ಮಾಡಿದರು.

Scroll to load tweet…


Scroll to load tweet…

Scroll to load tweet…