ನವದೆಹಲಿ, (ಮಾ.20): ದೇಶದಲ್ಲಿ ಮತ್ತೆ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 40,953 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದು ಕಳೆದ ನವೆಂಬರ್ ಈಚೆಗೆ ಇದು ಹೊಸ ದಾಖಲೆಯಾಗಿದೆ.

ಮಹಾರಾಷ್ಟ್ರ, ಪಂಜಾಬ್, ಕರ್ನಾಟಕ, ಗುಜರಾತ್ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಕಳೆದ ಒಂದು ವಾರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕೊರೋನಾ ಪಾಸಿಟಿವ್ ಕೇಸ್‌ಗಳು ಪತ್ತೆಯಾಗುತ್ತಿದ್ದ, ಆತಂಕಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಮತ್ತೆ ಕೊರೋನಾ ಸ್ಫೋಟ: ಪಾಸಿಟಿವ್ ಕೇಸ್‌ ಸಂಖ್ಯೆಯಲ್ಲಿ ಭಾರೀ ಏರಿಕೆ

ಈವರೆಗೆ ವರದಿಯಾದ ಒಟ್ಟಾರೆ ಕೊರೋನಾ ಪ್ರಕರಣಗಳ ಸಂಖ್ಯೆ 1,15,55,284 ಆಗಿದೆ. 188 ಸೋಂಕಿತರು ಸಾವನ್ನಪ್ಪಿದ್ದು, ಇಲ್ಲಿವರೆಗೆ ಒಟ್ಟು 1,59,558 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು 2,88,394 ಸಕ್ರಿಯಾ ಕೇಸ್​ಗಳಿದ್ದು, ಇಲ್ಲಿವರೆಗೆ 1,11,07,332 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 23,653 ಜನರ ಡಿಸ್ಚಾರ್ಜ್ ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಮಹಾರಾಷ್ಟ್ರ, ಪಂಜಾಬ್, ಕರ್ನಾಟಕ, ಗುಜರಾತ್  ರಾಜ್ಯಗಳಲ್ಲಿ ಒಂದು ದಿನಕ್ಕೆ ಶೇ.80.63ರಷ್ಟು ಕೊರೋನಾ ಪ್ರಕರಣಗಳು ಕಂಡುಬರುತ್ತಿವೆ.  

ಮಹಾರಾಷ್ಟ್ರದಲ್ಲಿ ಮಹಾಸ್ಫೋಟ
ಹೌದು.. ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಸತತ ಎರಡನೇ ದಿನ 25 ಸಾವಿರಕ್ಕೂ ಹೆಚ್ಚು ಜನರಿಗೆ ಕೋವಿಡ್ ಸೋಂಕು ತಾಗಿರುವುದು ದೃಢವಾಗಿದೆ. ಶುಕ್ರವಾರ ಮಹಾರಾಷ್ಟ್ರದಲ್ಲಿ 25,681 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದವು. ಗುರುವಾರ 25,853 ಸೋಂಕು ಪ್ರಕರಣಗಳು ದೃಢವಾಗಿದ್ದವು.

ಪಂಜಾಬ್‌ನಲ್ಲಿ ಶೈಕ್ಷಣಿಕೆ ಚಟುವಟಿಕೆಗಳು ಕ್ಲೋಸ್
ಕೊರೋನಾ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಪಂಜಾಬ್‌ನಲ್ಲಿ ಶೈಕ್ಷಣಿಕ ಕಾರ್ಯಚಟುವಟಿಕೆಗಳನ್ನು ಬಂದ್ ಮಾಡಲಾಗಿದೆ. ಪಂಜಾಬ್​ನಲ್ಲಿ ಕೋವಿಡ್​ ಪ್ರಕರಣ ಏರಿಕೆಯಾಗುತ್ತಿರುವ ಹಿನ್ನಲೆ ಬಿಗಿ ನಿಯಂತ್ರಣಕ್ಕೆ ಮುಂದಾಗಿರುವ ಅಮರಿಂದರ್​ ಸಿಂಗ್ ಸರ್ಕಾರ​, ಚಿತ್ರಮಂದಿರ ಹಾಗೂ ಮಾಲ್ ನಲ್ಲಿ ಶೇ. 50 ರಷ್ಟು ಸಾಮರ್ಥ್ಯದಲ್ಲಿ ಮಾತ್ರ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದೆ.